ಹಾಸನ-ಫೆ-೧೯. ನಗರದ ಹೊಸ ಲೈನ್ ರಸ್ತೆ ಗುಂಡಿ ಬಿದ್ದ ಸಂಪೂರ್ಣವಾಗಿ ಹಾಳಾಗಿದ್ದು, ಕೂಡಲೇ ದುರಸ್ತಿಗೊಳಿಸುವಂತೆ ಒತ್ತಾಯಿಸಿ ನಾಗರೀಕರು ಶುಕ್ರವಾರ ಹಾಸನದಲ್ಲಿ ಪ್ರತಿಭಟನೆ ನಡೆಸಿದರು.
ಹಾಸನ ನಗರದ ಹಾಸನಾಂಬ ದೇವಾಲಯದ ಬಳಿಯಿಂದ ಮೆರವಣಿಗೆ ಹೊರಟ ನೂರಾರು ನಾಗರೀಕರು, ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ನಂತರ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.
ಹೊಸಲೈನ್ ರಸ್ತೆಯಲ್ಲಿ ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತಿದ್ದು, ಗುಂಡಿ ಬಿದ್ದು ಸಂಪೂರ್ಣವಾಗಿ ಹಾಳಾಗಿದೆ. ಇದನ್ನು ಅಭಿವೃದ್ಧಿಪಡಿಸಿ ಡಂಬರೀಕರಣಗೊಳಿಸುವ ಕಾರ್ಯವನ್ನು ನಗರಸಭೆ ಹಮ್ಮಿಕೊಳ್ಳಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಕೂಡಲೇ ರಸ್ತೆ ದುರಸ್ತಿ ಕಾರ್ಯವನ್ನು ಹಮ್ಮಿಕೊಂಡು ಹಾಳಾಗಿರುವ ರಸ್ತೆಗೆ ಕಾಯಕಲ್ಪ ಒದಗಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಹಿಂದುಳಿದ ಒಕ್ಕೂಟದ ಮುಖಂಡ ಹೆಚ್.ಎನ್.ದ್ಯಾವಪ್ಪ ಇತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.