ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಗುಡ್ಡ ಕುಸಿದು 7ಮಂದಿ  ಸಾವು

ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಗುಡ್ಡ ಕುಸಿದು 7ಮಂದಿ  ಸಾವು

Tue, 16 Jul 2024 17:13:07  Office Staff   SOnews

ನದಿಯಲ್ಲಿ ಕೊಚ್ಚಿ ಹೋದ ಟ್ಯಾಂಕರ್: ಹೆದ್ದಾರಿ ಅಂಚಿನ ಟೀ ಸ್ಟಾಲ್, ಪಕ್ಕದ ತೀರದ ಮನೆ ನೆಲಸಮ:

ಅಂಕೋಲಾ ಹೆದ್ದಾರಿ ಸಂಚಾರ ಬಂದ್

 

ಅಂಕೋಲಾ : ಉ.ಕ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರೆದಿದ್ದು ಅಂಕೋಲಾ ತಾಲೂಕಿನ ಶಿರೂರು ಬಳಿ ರಾ.ಹೆ.66 ರಲ್ಲಿ ಭಾರಿ ಗುಡ್ಡ ಕುಸಿದ ಪರಿಣಾಮ ಒಂದೇ ಕುಟುಂಬ ಐವರು ಸೇರಿದಂತೆ 7 ಮಂದಿ ಮಣ್ಣಿನ ಅಡಿ ಸಿಲುಕಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.

ಈ ದುರ್ಘಟನೆಯಲ್ಲಿ ಮೃತಪಟ್ಟವರನ್ನು ಲಕ್ಷ್ಮಣ ನಾಯ್ಕ (47),  ಶಾಂತಿ ನಾಯ್ಕ(36), ರೋಶನ್ (11),  ಅವಾಂತಿಕಾ(6), ಜಗನ್ನಾಥ(55) ಸಾವನ್ನಪ್ಪಿದ್ದಾಗಿ ತಿಳಿದುಬಂದಿದೆ. ಇನ್ನೂ ಇಬ್ಬರ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆ ಹಾಗೂ ಚತುಷ್ಪತ ಹೆದ್ದಾರಿ ಕಾಮಗಾರಿ ಗುತ್ತಿಗೆ ಪಡೆದಿರುವ ಆಯ್ ಆರ್ ಬಿ ಅವೈಜ್ಞಾನಿಕ ಮತ್ತು ಅಪೂರ್ಣ ಕಾಮಗಾರಿಯಿಂದ, ರಾಷ್ಟ್ರೀಯ ಹೆದ್ದಾರಿ 66 ರ ಅಂಕೋಲಾ ಕುಮಟಾ ಮಾರ್ಗ ಮಧ್ಯೆ ಶಿರೂರು ಬೊಮ್ಮಯ್ಯ ದೇವಸ್ಥಾನದ ಬಳಿ ಭಾರಿ ಪ್ರಮಾಣದ ಗುಡ್ಡ ಕುಸಿತವಾಗಿದ್ದು, ಗುಡ್ಡ ಕುಸಿದ ಪರಿಣಾಮ ಹೆದ್ದಾರಿ ಅಂಚಿನ ಟೀ ಸ್ಟಾಲ್ ಮತ್ತಿತರ ಸಣ್ಣಪುಟ್ಟ ಅಂಗಡಿಗಳು ಸಂಪೂರ್ಣ ಸಂಪೂರ್ಣ ಹಾನಿಯಾಗಿದೆ . ಘಟನೆಯಲ್ಲಿ ಹಲವರು ಮಣ್ಣಿನಡಿ ಸಿಲುಕಿ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.

ಗುಡ್ಡ ಕುಸಿತ ರಬಸಕ್ಕೆ ಹೆದ್ದಾರಿ ಅಂಚಿಗೆ ನಿಲ್ಲಿಸಿಟ್ಟ ಗ್ಯಾಸ್ ಟ್ಯಾಂಕರ್ ವಾಹನ,ಗಂಗಾವಳಿ ನದಿ ನೀರಿನಲ್ಲಿ ಕೊಚ್ಚಿ ಹೋಗಿದೆ. ಲಾರಿ ಮತ್ತಿತರ ವಾಹನಗಳು ಮಣ್ಣಿನಡಿ ಸಿಲುಕಿಕೊಂಡಿವೆ . ಒಮ್ಮೆಲೆ ಗುಡ್ಡ ಕುಸಿದು ಮಣ್ಣು ನದಿಯಲ್ಲಿ ಜೋರಾಗಿ ಜರಿದ ಪರಿಣಾಮ ಗಂಗಾವಳಿ ನದಿ ಪಾತ್ರದ ಆಚೆ ದಡದ ಮನೆಯೂ ಕೊಚ್ಚಿಹೋಗಿದೆ ಎನ್ನಲಾಗಿದ್ದು,ಹೆದ್ದಾರಿ ಅಂಚಿಗಿರುವ ಟೀ ಸ್ಟಾಲ್ ,ವಾಹನಗಳಲ್ಲಿ ಎಷ್ಟು ಜನರಿದ್ದರು?ಎಲ್ಲರೂ ಪ್ರಾಣಪಾಯದಿಂದ ಪಾರಾಗಿದ್ದಾರೆಯೇ ? ಕೆಲ ಜೀವ ಹಾನಿಯಾದರೂ ಸಂಭವಿಸಿರಬಹುದು ಎನ್ನುತ್ತಾರೆ ಸ್ಥಳೀಯರು

ಪೊಲೀಸ್ ಅಗ್ನಿ ಶಾಮಕ, ಎನ್‌ಹೆಚ್ ಎಐ ಸುರಕ್ಷತಾ ಅಂಬುಲೆನ್ಸ್ ಮತ್ತಿತರ ಸ್ಥಳದಲ್ಲಿ ಬಿಡು ಬಿಟ್ಟಿದ್ದಾರೆ. ಬೆಂಗಳೂರಿನಲ್ಲಿರುವ ಶಾಸಕ ಸತೀಶ್ ಸೈಲ್ ವಿಷಯ ತಿಳಿದು, ಘಟನೆ ಕುರಿತು ತೀವ್ರ ಬೇಸರ ವ್ಯಕ್ತಪಡಿಸಿ,ಮಧ್ಯಾಹ್ನದೊಳಗೆ ಅಂಕೋಲಾಕ್ಕೆ ಬರುವುದಾಗಿ ತಿಳಿಸಿ, ಮತ್ತಷ್ಟು ಗುಡ್ಡ ಕುಸಿವ ಭೀತಿ ಇರುವುದರಿಂದ,ಸಂಬಂಧಿತ ಅಧಿಕಾರಿಗಳಿಗೆ ಫೋನ್ ಕರೆಯ ಮೂಲಕ ಮಾತನಾಡಿ,ಸ್ಥಳೀಯರ ಹಾಗೂ ಹೆದ್ದಾರಿ ಸಂಚರಿಗಳ ಸುರಕ್ಷತೆಗೆ ಒತ್ತು ನೀಡುವಂತೆ ತಿಳಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದಾಗಿದ್ದು,ಹೆದ್ದಾರಿ ಎರಡು ಕಡೆ ವಾಹನಗಳು ಸಾಲುಮಟ್ಟಿ ನಿಂತಿವೆ. ಗುಡ್ಡ ಕುಸಿತದಿಂದ ಪ್ರಾಣ ಹಾನಿ ಮತ್ತಿತರ ಹಾನಿಯಾಗಿರುವ ಸಾಧ್ಯತೆ ಇದ್ದು ಹೆಚ್ಚಿನ ವಿವರ ತಿಳಿದು ಬರಬೇಕಿದೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.


Share: