ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಅಂಕೋಲಾ: ಲೋಕಾಯುಕ್ತ ಅಧಿಕಾರಿಗಳಿಂದ ದೂರು ಅರ್ಜಿ ಸ್ವೀಕಾರ

ಅಂಕೋಲಾ: ಲೋಕಾಯುಕ್ತ ಅಧಿಕಾರಿಗಳಿಂದ ದೂರು ಅರ್ಜಿ ಸ್ವೀಕಾರ

Tue, 11 Jun 2024 02:07:59  Office Staff   SOnews

 

ಕಾರವಾರ: ಲೋಕಾಯುಕ್ತ ಅಧಿಕಾರಿಗಳು ಜೂನ್ 14 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1ಗಂಟೆವರೆಗೆ ಅಂಕೋಲಾ ತಾಲೂಕಿನ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ, ಸಾರ್ವಜನಿಕರಿಂದ ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿ ಭರ್ತಿ ಮಾಡಿದ ದೂರು ಅರ್ಜಿಗಳನ್ನು ಸ್ವೀಕಾರ ಮಾಡಿ ವಿಚಾರಣೆ ನಡೆಸಲಿದ್ದಾರೆ.

ಸರ್ಕಾರಿ ಕಚೇರಿಗಳಲ್ಲಿ ಕೆಲಸಗಳನ್ನು ನಿರ್ವಹಿಸಲು ಲಂಚಕ್ಕೆ ಬೇಡಿಕೆ ಮತ್ತು ಅರ್ಜಿಗಳ ವಿಲೇವಾರಿಗೆ ವಿಳಂಬ, ಸರ್ಕಾರಿ ಹಣ ದುರುಪಯೋಗ, ಕರ್ತವ್ಯ ಲೋಪ, ಕಳಪೆ ಕಾಮಗಾರಿ ಮಾಡುವ ಅಧಿಕಾರಿ, ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗಧಿತ ನಮೂನೆಯಲ್ಲಿ ಭರ್ತಿ ಮಾಡಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂ 08382-295293/ 220198 / 222250/ 222022/ 229988 ಕ್ಕೆ ಸಂಪರ್ಕಿಸಬಹುದಾಗಿದೆ ಎಂದು ಕಾರವಾರದ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share: