ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಉತ್ತರ ಕನ್ನಡ: ಉಪ ಲೋಕಾಯುಕ್ತರಿಂದ ಕಾನೂನು ವಿಚಾರಣೆ

ಉತ್ತರ ಕನ್ನಡ: ಉಪ ಲೋಕಾಯುಕ್ತರಿಂದ ಕಾನೂನು ವಿಚಾರಣೆ

Tue, 05 Mar 2024 20:46:28  Office Staff   SO News Service

ಕಾರವಾರ : ಕಾರವಾರದ ಉತ್ತರ ಕನ್ನಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಸೋಮವಾರ ಕರ್ನಾಟಕ ರಾಜ್ಯ ಗೌರವಾನ್ವಿತ ಉಪ ಲೋಕಾಯುಕ್ತರಾದ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ಉತ್ತರ ಕನ್ನಡ ಜಿಲ್ಲೆಗೆ ಸಂಬಂಧಪಟ್ಟಂತೆ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ (ಗೌರವಾನ್ವಿತ ಉಪಲೋಕಾಯುಕ್ತರ ಕಾರ್ಯವ್ಯಾಪ್ತಿಗೆ ಒಳಪಡುವ ಪ್ರಕರಣಗಳಲ್ಲಿ) ತನಿಖೆ ಅಥವಾ ವಿಚಾರಣೆಗೆ ಬಾಕಿಯಿರುವ ಪ್ರಕರಣಗಳಿಗೆ ಸಂಬಂಧಿಸಿದ ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ಕಾನೂನು ರೀತ್ಯಾ ವಿಚಾರಣೆ ನಡೆಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಲೋಕಾಯುಕ್ತ ಹೆಚ್ಚುವರಿ ನಿಬಂಧಕರು, ಉಪನಿಬಂಧಕರು, ಜಿಲ್ಲಾ ಪಂಚಾಯತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಅಪರ ಜಿಲ್ಲಾಧಿಕಾರಿಗಳು, ಪೋಲಿಸ್ ಅಧೀಕ್ಷಕರು, ಹೆಚ್ಚುವರಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸೇರಿದಂತೆ ಇನ್ನಿತರೆ ಪ್ರಮುಖರು ಉಪಸ್ಥಿತರಿದ್ದರು.


Share: