ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಕರ್ನಾಟಕದಲ್ಲಿ ಡೆಂಗ್ಯೂ; ಗ್ರಾಪಂಗಳಿಗೆ ಮುನ್ನೆಚ್ಚರಿಕೆ; ಪ್ರಿಯಾಂಕ್ ಖರ್ಗೆ

ಕರ್ನಾಟಕದಲ್ಲಿ ಡೆಂಗ್ಯೂ; ಗ್ರಾಪಂಗಳಿಗೆ ಮುನ್ನೆಚ್ಚರಿಕೆ; ಪ್ರಿಯಾಂಕ್ ಖರ್ಗೆ

Mon, 08 Jul 2024 12:52:42  Office Staff   Vb

ಬೆಂಗಳೂರು: ರಾಜ್ಯ ದಲ್ಲಿ ಡೆಂಗಿ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಿಸಲು ರಾಜ್ಯದ ಎಲ್ಲ ಗ್ರಾಮ ಪಂಚಾಯತ್‌ಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ನಿರ್ದೇಶಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ರವಿವಾರ ಈ ಸಂಬಂಧ ಮಾಹಿತಿ ನೀಡಿರುವ ಅವರು, “ಕುಡಿಯುವ ನೀರಿನ ಸರಬರಾಜು ಟ್ಯಾಂಕ್‌ಗಳು, ತೆರೆದ ತೊಟ್ಟಿಗಳು ಮತ್ತು ಸಾರ್ವಜನಿಕ ಶೌಚಾಲಯಗಳಲ್ಲಿ ನೀರು ಶೇಖರಣೆ ಮಾಡುವ ತೊಟ್ಟಿಗಳನ್ನು ವಾರಕ್ಕೊಮ್ಮೆ ಶುಚಿಗೊಳಿಸಲು ಕ್ರಮ ಕೈಗೊಳ್ಳಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಡೆಂಗಿ ಹರಡುವುದನ್ನು ತಡೆಗಟ್ಟಲು ಮತ್ತು ಡೆಂಗಿ ಪ್ರಕರಣಗಳನ್ನು ನಿಯಂತ್ರಿಸಲು ಹಲವು ತುರ್ತು ಕ್ರಮಗಳನ್ನು ಸೂಚಿಸಿದ್ದು, ಪಂಚಾಯತ್ ಮಟ್ಟದಲ್ಲಿ ಲೋಪವಾಗದಂತೆ ಅನುಷ್ಠಾನಗೊಳಿಸಬೇಕೆಂದು ಹೇಳಿದ್ದಾರೆ. ಅಂಗನವಾಡಿ, ಶಾಲಾ-ಕಾಲೇಜುಗಳು, ವಸತಿ ಶಾಲೆಗಳ ಮೇಲ್ಪಾವಣಿಗಳು ಮತ್ತು ಆವರಣಗಳಲ್ಲಿ ಮಳೆನೀರು ಸಂಗ್ರಹವಾಗದಂತೆ ಹಾಗೂ ನೀರಿನ ಶೇಖರಣೆಗಳಲ್ಲಿ ಈಡಿಸ್ ಸೊಳ್ಳೆಗಳು ಉತ್ಪತ್ತಿಯಾಗದಂತೆ ಕ್ರಮವಹಿಸುವುದು. ಗ್ರಾಮಗಳಲ್ಲಿರುವ ಸಮುದಾಯದ ಶೌಚಾಲಯಗಳಲ್ಲಿ ಹಾಗೂ ಮನೆಗಳ ಶೌಚಾಲಯಗಳ ಪಕ್ಕದಲ್ಲಿರುವ ನೀರಿನ ತೊಟ್ಟಿಗಳಿಗೆ ಮುಚ್ಚಳವನ್ನು ಅಳವಡಿಸಬೇಕು ಎಂದು ಹೇಳಿದ್ದಾರೆ.

ಗ್ರಾಮಗಳಲ್ಲಿ ಜಾನುವಾರುಗಳಿಗೆ ಕುಡಿಯುವ ನೀರಿನ ಸೌಲಭ್ಯಕ್ಕಾಗಿ ಕಟ್ಟಿಸಿರುವ ತೊಟ್ಟಿಗಳನ್ನು ವಾರಕ್ಕೊಮ್ಮೆ ಕಡ್ಡಾಯವಾಗಿ ಸ್ವಚ್ಛಗೊಳಿಸಬೇಕು. ಖಾಲಿ ನಿವೇಶನಗಳಲ್ಲಿ ಘನತ್ಯಾಜ್ಯ ವಸ್ತುಗಳು ಮತ್ತು ಮಳೆ ನೀರು ಸಂಗ್ರಹವಾಗದಂತೆ ಕ್ರಮವಹಿಸಲು ನಿವೇಶನಗಳ ಮಾಲಕರಿಗೆ ಸೂಚನೆ ನೀಡಬೇಕು. ಸೂಚನೆ ಪಾಲಿಸದವರಿಗೆ ನಿಯಮಾನುಸಾರ ದಂಡ ವಿಧಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪ್ರಿಯಾಂಕ್ ಖರ್ಗೆ ಕಟ್ಟೆಚ್ಚರ ನೀಡಿದ್ದಾರೆ.


Share: