ಶಿರಸಿ, ಜನವರಿ 6: ಜನವರಿ 7 ರಿಂದ ಪ್ರಾರಂಭವಾಗಲಿರುವ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಕರ್ನಾಟಕದ ಒಟ್ಟು 34ಶಿಕ್ಷಣಾ ಜಿಲ್ಲೆಗಳಿಂದ ಒಟ್ಟು 2,142 ವಿದ್ಯಾರ್ಥಿಗಳು ಭಾಗವಹಿಸಲು ತುದಿಗಾಲಿನಲ್ಲಿ ನಿಂತಿದ್ದಾರೆ.
ನಗರದ ಮಾರಿಕಾಂಬಾ ಜ್ಯೂನಿಯರ್ ಕಾಲೇಜಿನಲ್ಲಿ ನಡೆಯಲಿರುವ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಒಟ್ಟು 108 ನಿರ್ಣಾಯಕರೂ 102 ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ತಾಲ್ಲೂಕು ಪಂಚಾಯತ್ ಅಧ್ಯಕ್ಷ ಸದಾನಂದ ಭಟ್ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಕನ್ನಡ ಮಾಧ್ಯಮದಲ್ಲಿ ಕಳೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ತೋರಿದ ಎಪ್ಪತ್ತು ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಈ ಮಹಾಸಮಾವೇಶಕ್ಕೆ ಆಗಮಿಸಲಿರುವ ವಿದ್ಯಾರ್ಥಿಗಳು ಹಾಗೂ ಅವರ ಪಾಲಕ/ಪೋಷಕರಿಗಾಗಿ ನಗರದ ಇಪ್ಪತ್ತೈದಕ್ಕೂ ಹೆಚ್ಚು ಸ್ಥಳಗಳಲ್ಲಿ ವಸತಿ ಸೌಕರ್ಯ ಏರ್ಪಡಿಸಲಾಗಿದೆ ಅಲ್ಲದೇ ಶಿರಸಿ ಸೆಂಟ್ರಲ್ ಬಸ್ ನಿಲ್ದಾಣದ ಬಳಿ ಮಳಿಗೆಯೊಂದನ್ನೂ ತೆರೆಯಲಾಗುವುದು ಎಂದು ಅವರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಕೆಳಕಂಡ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ:
ಮಾಹಿತಿ: ೯೪೪೮೬೧೧೨೬೪
ವಸತಿ: ೯೪೪೯೨೯೨೧೩೧