ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಕಾರವಾರದಲ್ಲಿ ಸಡಗರದ ಕನ್ನಡ ರಾಜ್ಯೋತ್ಸವದ ಆಚರಣೆ

ಕಾರವಾರದಲ್ಲಿ ಸಡಗರದ ಕನ್ನಡ ರಾಜ್ಯೋತ್ಸವದ ಆಚರಣೆ

Sat, 02 Nov 2024 05:18:42  Office Staff   SO News

ಕಾರವಾರ : ಕಾರವಾರದ ಪೊಲೀಸ್ ಪೆರೇಡ್ ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ  ಆಯೋಜಿಸಲಾಗಿದ್ದ 69ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ರಾಜ್ಯದ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲ ಸಾರಿಗೆ ಸಚಿವರು ಹಾಗೂ ಜಿಲ್ಲಾ   ಉಸ್ತುವಾರಿ ಸಚಿವರಾದ ಮಂಕಾಳ ವೈದ್ಯ ಅವರು  ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ವಿವಿಧ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿ ರಾಜ್ಯೋತ್ಸವದ ಸಂದೇಶ ನೀಡಿದರು. ಈ ವೇಳೆ ಆಕರ್ಷಕ ಪಥ ಸಂಚಲನ ನಡೆಯಿತು.

ವಿಧಾನ ಪರಿಷತ್ ಶಾಸಕ ಗಣಪತಿ ಉಳ್ವೆಕರ್, ನಗರ ಸಭೆ ಅಧ್ಯಕ್ಷ ರವಿರಾಜ್ ಅಂಕೋಲೆಕರ್, ಜಿಲ್ಲಾಧಿಕಾರಿ ಕೆ.ಲಕ್ಷ್ಮೀ ಪ್ರಿಯ,  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ್, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಉಪವಿಭಾಗಾಧಿಕಾರಿ ಕನಿಷ್ಕ ಉಪಸ್ಥಿತರಿದ್ದರು.


Share: