ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಕಾರವಾರದ ನೌಕಾನೆಲೆ ಕಾಲೋನಿಯಲ್ಲಿ ಸಿಲಿಂಡರ್ ಸ್ಫೋಟ:ಹಲವು ಶೆಡ್​ಗಳು ಹಾನಿ

ಕಾರವಾರದ ನೌಕಾನೆಲೆ ಕಾಲೋನಿಯಲ್ಲಿ ಸಿಲಿಂಡರ್ ಸ್ಫೋಟ:ಹಲವು ಶೆಡ್​ಗಳು ಹಾನಿ

Mon, 11 Mar 2024 00:43:19  Office Staff   SO News Service

ಕಾರವಾರ: ಕಾರ್ಮಿಕರು ವಾಸಿಸುವ ಶೆಡ್​​ನಲ್ಲಿ ಸಿಲಿಂಡರ್ ಸ್ಫೋಟಗೊಂಡು ಹಲವು ಶೆಡ್​ಗಳು ಹಾನಿಗೊಳಗಾಗಿದ್ದು, ಅದೃಷ್ಟವಶಾತ್ ಕಾರ್ಮಿಕರು ಪ್ರಾಣಪಾಯದಿಂದ ಪಾರಾದ ಘಟನೆ ಕಾರವಾರದ ಮುದಗಾ ನೌಕಾನೆಲೆ ಲೇಬರ್ ಕಾಲೋನಿಯಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ.

 

WhatsApp_Image_2024-03-10_at_6_40_17_PM.jpeg

ನೌಕಾನೆಲೆಯ ಎನ್‌ಸಿಸಿ ಗುತ್ತಿಗೆ ಕಂಪೆನಿ ಕಾರ್ಮಿಕರು 150 ಕ್ಕೂ ಹೆಚ್ಚು ಶೆಡ್‌ಗಳಲ್ಲಿ‌ ವಾಸ ಮಾಡುತ್ತಿದ್ದಾರೆ. ಇಂದು ಬೆಳಗ್ಗೆ ಅಡುಗೆಯ ಸಿಲಿಂಡರ್ ಸಿಡಿದು ಬೆಂಕಿ ಹೊತ್ತಿಕೊಂಡಿದ್ದು, ಒಂದು ಸಾಲಿನ ನಾಲ್ಕೈದು ಶೆಡ್‌ಗಳಿಗೆ ಬೆಂಕಿ ವ್ಯಾಪಿಸಿಕೊಂಡಿದೆ.

ಬೃಹತ್ ಪ್ರಮಾಣದಲ್ಲಿ ಸ್ಫೋಟ ಸಂಭವಿಸಿದ ಕಾರಣ ಶೆಡ್​ನಲ್ಲಿದ್ದ ಕಾರ್ಮಿಕರು ತಕ್ಷಣವೇ ಹೊರಗೆ ಓಡಿದ್ದಾರೆ. ಹಲವರು ಗಾಯಗೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.


Share: