ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಕಾರವಾರ: ನರೇಗಾ ಕಾಮಗಾರಿಗಳಿಗೆ ಆದ್ಯತೆ ನೀಡಿ- ಜಿಪಂ ಸಿಇಒ ಈಶ್ವರ ಕಾಂದೂ

ಕಾರವಾರ: ನರೇಗಾ ಕಾಮಗಾರಿಗಳಿಗೆ ಆದ್ಯತೆ ನೀಡಿ- ಜಿಪಂ ಸಿಇಒ ಈಶ್ವರ ಕಾಂದೂ

Wed, 23 Oct 2024 05:59:28  Office Staff   S O News

ಕಾರವಾರ: ಜಿಲ್ಲೆಯಾದ್ಯಂತ ಗ್ರಾಮೀಣ ಪ್ರದೇಶದಲ್ಲಿ ನರೇಗಾ ಹಾಗೂ ವಿವಿಧ ಇಲಾಖೆಗಳ ಒಗ್ಗೂಡಿಸುವಿಕೆಯಡಿ ಕೈಗೊಳ್ಳುವ ಕಟ್ಟಡ ಕಾಮಗಾರಿಗಳ ಪೈಕಿ, ನರೇಗಾ ಅನುದಾನದ ಕೆಲಸ ಕಾರ್ಯಗಳನ್ನ ಪ್ರಾರಂಭದಲ್ಲೇ ಕೈಗೆತ್ತಿಕೊಂಡು ಮುಗಿಸಬೇಕು. ಬೇರೆ ಅನುದಾನ ಮೊದಲಿಗೆ ಬಳಸಿ ನಂತರ ನರೇಗಾ ಕೆಲಸ ಬಾಕಿಯಿಟ್ಟು ಕಾಮಗಾರಿ ಪೂರ್ಣಗೊಳಿಸುವುದರಲ್ಲಿ ವಿಳಂಬ ಮಾಡುವುದನ್ನು ಸಹಿಸುವುದಿಲ್ಲ ಎಂದು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್‌ನ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕಾಂದೂ ಸೂಚಿಸಿದರು.

ಅವರು ಮಂಗಳವಾರ ಜಿಲ್ಲಾ ಪಂಚಾಯತ್‌ನ ಸಭಾಂಗಣದಲ್ಲಿ ಜರುಗಿದ ಪ್ರಾಥಮಿಕ, ಪ್ರೌಢ, ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪಿಆರ್‌ಇಡಿ ಮತ್ತು ಆರ್‌ಡಬ್ಲ್ಯುಎಸ್, ತಾಲ್ಲೂಕು ಪಂಚಾಯತ್‌ನ ಕಾರ್ಯನಿರ್ವಾಹಕ ಅಧಿಕಾರಿಗಳು, ನರೇಗಾ ಸಹಾಯಕ ನಿರ್ದೇಶಕರು, ಕಡಿಮೆ ಪ್ರಗತಿ ಸಾಧಿಸಿದ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಮಾಸಿಕÀ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.  

ಪ್ರತಿಯೊಬ್ಬ ರಾಜ್ಯ ಸರಕಾರಿ, ಹೊರಗುತ್ತಿಗೆ ನೌಕರರು, ಸಿಬ್ಬಂದಿ ತಾವು ಖಾತೆ ಹೊಂದಿರುವ ಬ್ಯಾಂಕ್‌ಗಳಲ್ಲಿ ಕಡ್ಡಾಯವಾಗಿ ಪ್ರತಿವಷÀð ಕೇವಲ 20 ರೂ ಪ್ರೀಮಿಯಂ ತುಂಬುವ ಮೂಲಕ ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಹಾಗೂ ವಾರ್ಷಿಕ 436 ರೂ ಪ್ರೀಮಿಯಂ ತುಂಬುವ ಮೂಲಕ ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಭೀಮಾ ಇನ್ಶುರೆನ್ಸ್ ಮಾಡಿಸಿಕೊಳ್ಳಬೇಕು. ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಇನ್ಶುರೆನ್ಸ್ ಮಾಡಿಸಿದವರು ಮೃತರಾದರೆ 2.50 ಲಕ್ಷದವರೆಗೂ ಮತ್ತು ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಭೀಮಾ ಇನ್ಶುರೆನ್ಸ್ ಮಾಡಿಸಿದವರು ಮೃತರಾದರೆ 4 ಲಕ್ಷದವರೆಗೆ ವಿಮಾ ಪರಿಹಾರ ದೊರೆಯಲಿದೆ.
ಈಶ್ವರ ಕಾಂದೂ,
ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು,
ಜಿಲ್ಲಾ ಪಂಚಾಯತ, ಉತ್ತರ ಕನ್ನಡ

ಜಿಲ್ಲೆಯ ಎಲ್ಲ ತಾಲ್ಲೂಕಿನ ಗ್ರಾಮೀಣ ಪ್ರದೇಶದಲ್ಲಿ ಬಳಕೆಯಾಗದೇ ಖಾಲಿಯಿರುವ ಸರಕಾರಿ ಕಟ್ಟಡಗಳನ್ನು ಗುರುತಿಸಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅಂಗನವಾಡಿ ಕೇಂದ್ರಗಳಿಗೆ ನೀಡಿ, ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ ಅಂಗನವಾಡಿ ಕೇಂದ್ರಗಳ ಸಂಖ್ಯೆ ಕಡಿಮೆಗೊಳಿಸಬೇಕು. ಪ್ರತಿಯೊಬ್ಬರೂ ನಿಗದಿತ ಗುರಿಯನ್ನು ಇಟ್ಟುಕೊಂಡು ಕಾರ್ಯನಿರ್ವಹಿಸಬೇಕು ಎಂದ ಅವರು, ತಾಲ್ಲೂಕು ಭೇಟಿ ವೇಳೆ ಅಂಗನವಾಡಿಗಳಲ್ಲಿ ಮಕ್ಕಳ ಹಾಜರಾತಿ, ಕಾರ್ಯಕರ್ತೆಯರು ಹಾಗೂ ಸಹಾಯಕರ ಅಲಭ್ಯತೆ ಕಂಡು ಬರುತ್ತಿದೆ. ಹೀಗಾಗಿ ಸಂಬAಧಿಸಿದ ತಾಲ್ಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕ್ಷೇತ್ರ ಭೇಟಿ ಕಾರ್ಯ ಕೈಗೊಂಡು ಜಿಲ್ಲಾ ಪಂಚಾಯತ್‌ಗೆ ವರದಿ ಸಲ್ಲಿಸಬೇಕು. ತಾಲ್ಲೂಕಾ ಎನ್‌ಆರ್‌ಸಿ ಕೇಂದ್ರಕ್ಕೆ ಸ್ಯಾಮ್, ಮ್ಯಾಮ್ ಮಕ್ಕಳನ್ನ ಕರೆತಂದು ಜಾಗ್ರತೆವಹಿಸುವ ಕುರಿತು ಹೆಚ್ಚು ಕ್ರಮವಹಿಸಬೇಕು ಎಂದರು.

ಎಸ್‌ಬಿಎA ಯೋಜನೆಯಡಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿದ್ದು, ಎಲ್ಲ ಕಸ ವಿಲೇವಾರಿ ಘಟಕಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವಂತೆ ನೋಡಿಕೊಳ್ಳಬೇಕು. ಹೆಚ್ಚಿನ ಆಧ್ಯತೆಯ ಮೇರೆಗೆ ಬೂದು ನೀರು ನಿರ್ವಹಣ ಘಟಕ ಕಾಮಗಾರಿ ತೆಗೆದುಕೊಳ್ಳಬೇಕು. ಕೈಗೊಳ್ಳುವ ಪ್ರತಿಯೊಂದು ವೈಯಕ್ತಿಕ ಶೌಚಾಲಯ ಕಾಮಗಾರಿಗಳ ಜೀಯೋಟ್ಯಾಗ್ ಬಾಕಿ ಉಳಿಯದಂತೆ ಕ್ರಮವಹಿಸಬೇಕು. ಜೊತೆಗೆ ತಾಲ್ಲೂಕು ಹಾಗೂ ಗ್ರಾಮ ಪಂಚಾಯತಿಗಳ ಪ್ರತಿಯೊಬ್ಬ ಅಧಿಕಾರಿಗಳು, ಸಿಬ್ಬಂದಿ ತಮ್ಮ ಜವಾಬ್ದಾರಿ ಅರಿತು ಕಾರ್ಯನಿರ್ವಹಿಸಬೇಕು ಎಂದರು.

 ಜಿಲ್ಲೆಯಲ್ಲಿ ಜೆಜೆಎಂ ಯೋಜನೆಯ ಸಮರ್ಪಕ ಅನುಷ್ಠ್ಠಾನ ಹಾಗೂ ಗುಣಮಟ್ಟದ ಕುರಿತು ಸಾರ್ವಜನಿಕರಿಂದ ದೂರುಗಳು ಬರುತ್ತಿದ್ದು, ಎಲ್ಲ ಎಇಇ ಅವರು ತಮ್ಮ ವ್ಯಾಪ್ತಿಯಲ್ಲಿನ ಗುತ್ತಿಗೆದಾರ ಕಂಪೆನಿಗಳಿಗೆ ಗುಣಮಟ್ಟದ ಕಾಮಗಾರಿ ಕೈಗೊಳ್ಳುವಂತೆ ಸೂಚಿಸಿ, ಯೋಜನೆಯು ಜನರಿಗೆ ತಲುಪುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಬ್ಯಾಚ್-2, 3 ಮತ್ತು 4ರಲ್ಲಿ ಕೈಗೊಂಡ ಕಾಮಗಾರಿಗಳ ಮುಕ್ತಾಯ ಪ್ರಮಾಣದಲ್ಲಿ ಪ್ರಗತಿ ಕಡಿಮೆಯಿದ್ದು, ಮುಂದಿನ ಸಭೆಯೊಳಗೆ ಹೆಚ್ಚಿನ ಪ್ರಗತಿ ಸಾಧಿಸಬೇಕು ಎಂದರು.

ನರೇಗಾದಡಿ ಮಾನವ ದಿನಗಳ ಸೃಜನೆಯ ಪ್ರಗತಿಯಲ್ಲಿ ಜಿಲ್ಲೆಯ ಎಲ್ಲ ತಾಲ್ಲೂಕುಗಳ ಪ್ರಗತಿ ಕಡಿಮೆಯಾಗುತ್ತಿದೆ. ಹೀಗಾಗಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು, ನರೇಗಾ ಸಹಾಯಕ ನಿರ್ದೇಶಕರುಗಳು ತಮ್ಮ ವ್ಯಾಪ್ತಿಯ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಸಮನ್ವಯತೆ ಸಾಧಿಸಿ ಶೇ. 100ರಷ್ಟು ನಿಗದಿತ ಗುರಿ ಸಾಧಿಸಲು ಕ್ರಮವಹಿಸಬೇಕು. ನರೇಗಾದಲ್ಲಿ 260ಕ್ಕೂ ಅಧಿಕ ವಿವಿಧ ಕಾಮಗಾರಿಗಳಿದ್ದು, ಗ್ರಾಪಂ ಪಿಡಿಒ ರವರು ಕೇವಲ ಕಾಲುವೆ, ಕೆರೆಯಂತಹ ಕಾಮಗಾರಿಗಳಿಗೆ ಸೀಮಿತವಾಗದೇ ಬೇರೆ ಬೇರೆ ಕಾಮಗಾರಿಗಳನ್ನ ತೆಗೆದುಕೊಂಡು ಮಾನವ ದಿನ ಸೃಜನೆಯ ಪ್ರಗತಿ ಸಾಧಿಸಬೇಕು. ಇಒ ಹಾಗೂ ಎಡಿ ಅವರುಗಳು ಪ್ರತೀ ಗ್ರಾಪಂ ಪಿಡಿಒ, ಕಾರ್ಯದರ್ಶಿಗಳಿಗೆ ವಿಶೇಷÀವಾಗಿ ಪ್ರಗತಿ ಪರಿಶೀಲನಾ ಸಭೆ ನಡೆಸುವ ಮೂಲಕ ಹೆಚ್ಚಿನ ಪ್ರಗತಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.

 ಪಿಡಿಒ ಗಳು ಅನುಷ್ಠ್ಠಾನ ಇಲಾಖೆಗಳೊಂದಿಗೆ ಸಮಾಲೋಚಿಸಿ ಏನಾದರೂ ತಾಂತ್ರಿಕ ಸಮಸ್ಯೆಗಳಿದ್ದರೆ ಪರಸ್ಪರ ಬಗೆಹರಿಸಿಕೊಂಡು ಒಗ್ಗೂಡಿಕೊಂಡು ಕಾರ್ಯನಿರ್ವಹಿಸಬೇಕು. ಐಇಸಿ, ಎಂಐಎಸ್ ಹಾಗೂ ತಾಂತ್ರಿಕ ಸಂಯೋಜಕರು, ತಾಂತ್ರಿಕ ಸಹಾಯಕರು, ಬಿಎಫ್‌ಟಿ, ಜಿಕೆಎಂ, ಗ್ರಾಪಂ ಅಧಿಕಾರಿಗಳು, ಸಿಬ್ಬಂದಿಗಳು ಒಗ್ಗೂಡಿಕೊಂಡು ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ 2 / 2 ಅಭಿಯಾನಗಳನ್ನು ಆಯೋಜಿಸಿ ಜನರಿಗೆ ನರೇಗಾ ಕುರಿತು ಜಾಗೃತಿ ಮೂಡಿಸಿ ಪ್ರಗತಿ ಸಾಧಿಸಬೇಕು. ಕಾಲ ಕಾಲಕ್ಕೆ ಸಾಮಾಜಿಕ ಲೆಕ್ಕಪರಿಶೋಧನಾ ಸಭೆ ನಡೆಸಬೇಕು ಎಂದು ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್‌ನ ಆಡಳಿತ ಶಾಖೆಯ ಉಪ ಕಾರ್ಯದರ್ಶಿ ನಾಗೇಶ ರಾಯ್ಕರ, ಅಭಿವೃದ್ಧಿ ಶಾಖೆಯ ಉಪ ಕಾರ್ಯದರ್ಶಿ ಪ್ರಕಾಶ ಹಾಲಮ್ಮನವರ, ಮುಖ್ಯ ಲೆಕ್ಕಾಧಿಕಾರಿ ಆನಂದಸಾ ಅಬೀಬ, ಮುಖ್ಯ ಯೋಜನಾಧಿಕಾರಿ ವಿನೋದ ಅಣ್ವೇಕರ, ಯೋಜನಾ ನಿರ್ದೇಶಕ ಕರೀಂ ಅಸಾದಿ, ಹಾಗೂ ಜಿ.ಪಂ. ಅಧೀನದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.


Share: