ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಕಾರವಾರ: ಬ್ಯಾಟ್ ಬೀಸಿದ ಡಿಸಿ, “ಸ್ವೀಪ್” ಶಾಟ್ ಹೊಡೆದ ಸಿಇಓ

ಕಾರವಾರ: ಬ್ಯಾಟ್ ಬೀಸಿದ ಡಿಸಿ, “ಸ್ವೀಪ್” ಶಾಟ್ ಹೊಡೆದ ಸಿಇಓ

Sun, 07 Apr 2024 06:16:26  Office Staff   S O News

ಕಾರವಾರ: ಕ್ರಿಕೆಟ್ ಪಿಚ್‌ನಲ್ಲಿ ಜಿಲ್ಲಾ ಚುನಾವಣಾಧಿಕಾರಿಕಾರಿ ಹಾಗೂ ಜಿಲ್ಲಾಧಿಕಾರಿಗಳು ಬ್ಯಾಟ್ ಬೀಸುವ ಮೂಲಕ ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷರು “ಸ್ವೀಪ್” ಶಾಟ್ ಬಾರಿಸುವ ಮೂಲಕ ಚುನಾವಣಾ ಜಾಗೃತಿ ಅಭಿಯಾನ ಕಾರ್ಯಕ್ರಮಕ್ಕೆ ವಿಶಿಷ್ಠ ರೀತಿಯಲ್ಲಿ ಚಾಲನೆ ನೀಡಿದರು.

ಜಿಲ್ಲೆಯಲ್ಲಿ ಮೇ 7 ರಂದು ನಡೆಯಲಿರುವ ಲೋಕಸಭಾ ಚುನಾವಣಾ ಪ್ರಯುಕ್ತ, ಮತದಾನ ಪ್ರಕ್ರಿಯೆಯಲ್ಲಿ ಎಲ್ಲಾ ಮತದಾರರಿಂದ ತಪ್ಪದೇ ಮತದಾನ ಮಾಡಿಸುವ ನಿಟ್ಟಿನಲ್ಲಿ ಜಾಗೃತಿ ಮೂಡಿಸಲು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉತ್ತರ ಕನ್ನಡ, ತಾಲೂಕು ಪಂಚಾಯತ್ ಕಾರವಾರ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಕಾರವಾರದ ಮಾಲಾದೇವಿ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿ ಇಂದು ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ, ಜಿಲ್ಲೆಯಲ್ಲಿ ಮೇ 7 ರಂದು ಮತದಾನ ನಡೆಯಲಿದ್ದು, ಎಲ್ಲಾ ಅರ್ಹ ಮತದಾರರು ಯಾವುದೇ ಆಮಿಷಗಳಿಗೆ ಒಳಗಾಗದೇ ಚುನಾವಣೆಯಲ್ಲಿ ತಮ್ಮ ಮತ ಚಲಾಯಿಸಬೇಕು. ಮತದಾರರರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಜಿಲ್ಲಾ ಸ್ವೀಪ್ ಸಮಿತಿವತಿಯಿಂದ ಜಿಲ್ಲೆಯಾದ್ಯಂತ ಹಲವು ರೀತಿಯ ಜಾಗೃತಿ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುತ್ತಿದೆ. ಮತದಾನ ಮಾಡುವುದು ಪ್ರತಿಯೊಬ್ಬರ ಹಕ್ಕು, ಎಲ್ಲರೂ ತಪ್ಪದೇ ಮತದಾನ ಮಾಡಬೇಕು, ನಾನೂ ಸಹ ಮತದಾನ ಮಾಡುತ್ತೇನೆ ಎಂದರು.

ಜಿಲ್ಲೆಯಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶೇ.75 ರಷ್ಟು ಮತದಾನವಾಗಿದ್ದು, ಈ ಬಾರಿ ಶೇ.85 ಕ್ಕೂ ಹೆಚ್ಚು ಮತದಾನವಾಗಬೇಕು ಎನ್ನುವ ಗುರಿ ಹೊಂದಿದ್ದು ಈ ನಿಟ್ಟಿನಲ್ಲಿ, ಸ್ವೀಪ್ ವತಿಯಿಂದ ವ್ಯಾಪಕ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ.ಕಳೆದ ಬಾರಿ ಕಡಿಮೆ ಮತದಾನವಾಗಿರುವ ಮತಗಟ್ಟೆಗಳಲ್ಲಿ ಈ ಬಾರಿ ಹೆಚ್ಚಿನ ಮತದಾನವಾಗುವಂತೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಗ್ರಾಮಾಂತರ ಪ್ರದೇಶದಲ್ಲಿ ನರೇಗಾ ಕಾರ್ಮಿಕರು ಸೇರಿದಂತೆ ಪ್ರತಿಯೊಬ್ಬರಿಗೂ ಅರಿವು ಮೂಡಿಸಲಾಗುತ್ತಿದೆ. ಮೇ 7 ರಂದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಕೇಂದ್ರಗಳಿಗೆ ಆಗಮಿಸಿ ತಮ್ಮ ಮತ ಚಲಾಯಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕಾಂದೂ ಹೇಳಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲರಿಗೂ ಮತದಾರರ ಪ್ರತಿಜ್ಞಾ ವಿಧಿ ಭೋದಿಸಲಾಯಿತು. ಯುವ ಮತದಾರರಿರಿಗೆ ಮತದಾನದ ಮಹತ್ವ ಕುರಿತ ಕರಪತ್ರಗಳನ್ನು ವಿತರಿಸಲಾಯಿತು.

ಕ್ರಿಕೆಟ್ ಪಂದ್ಯದಲ್ಲಿ , ಜಿಲ್ಲಾ ಪಂಚಾಯತ್ ವತಿಯಿಂದ ಸ್ವೀಪ್ ಸೂಪರ್ ಸ್ಟಾರ್ ತಂಡ, ಜಿಲ್ಲಾಧಿಕಾರಿಗಳ ಕಛೇರಿಯಿಂದ ಆರ್.ಒ. ಸೂಪರ್ ಸ್ಟಾರ್ ತಂಡ, ಎಸ್.ಪಿ. ಕಚೇರಿಯಿಂದ ಸಿವಿಜಿಲ್ ಕಾಪ್ಸ್ ಹಾಗೂ ಪತ್ರಿಕಾ ಮಾಧ್ಯಮದಿಂದ ಮಿಡಿಯಾ ವಾರಿಯರ್ಸ್ ತಂಡಗಳು ಭಾಗವಹಿಸಿದ್ದವು.

ಜಿಲ್ಲಾ ಪಂಚಾಯತ್‌ನ ಸ್ವೀಪ್ ಸೂಪರ್ ಸ್ಟಾರ್ ತಂಡ ಮತ್ತು ಪತ್ರಿಕಾ ಮಾಧ್ಯಮದ ಮಿಡಿಯಾ ವಾರಿಯರ್ಸ್ ತಂಡಗಳ ನಡುವೆ ನಡೆದ ಮೊದಲ ಪಂದ್ಯದಲ್ಲಿ ಬ್ಯಾಟಿಂಗ್ ಮಾಡಿದ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕಾಂದೂ, ಕವರ್ ಡ್ರೆöÊವ್, ಲಾಂಗ್ ಆನ್ ಶಾಟ್, ಸ್ಟೆçöÊಟ್ ಡ್ರೆöÊವ್ ಮತ್ತು ಸ್ವೀಪ್ ಶಾಟ್ ಗಳ ಮೂಲಕ ಉತ್ತಮ ಬ್ಯಾಟಿಂಗ್ ಕೌಶಲ್ಯ ಪ್ರದರ್ಶಿಸಿದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್, ಉಪ ವಿಭಾಗಾಧಿಕಾರಿ ಕನಿಷ್ಕ, ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಜಯಕುಮಾರ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಸತೀಶ್ ಮತ್ತಿತರರು ಉಪಸ್ಥಿತರಿದ್ದರು.


Share: