ಕಾರವಾರ: ಸಮಾಜದ ಕಟ್ಟಕಡೆಯ ಅರ್ಹ ವ್ಯಕ್ತಿಗೂ ಸರ್ಕಾರದ ಮಹತ್ವಾಂಕ್ಷೆ ಗ್ಯಾರಂಟಿ ಯೋಜನೆಗಳ ಸೌಲಭ್ಯದ ಪ್ರಯೋಜನವನ್ನು ಪಡೆಯಲು ತಕ್ಷಣದಲ್ಲಿ ಸ್ಪಂದಿಸಲು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ರಚನೆ ಮಾಡಲಾಗಿದೆ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಹೇಳಿದರು.
ಅವರು ಗುರವಾರ ಜಿಲ್ಲಾ ಪಂಚಾಯತ್ ಕಾರ್ಯಾಲಯದಲ್ಲಿನ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಕಚೇರಿ ಉದ್ಘಾಟನೆ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಮಿತಿ ಸದಸ್ಯರು ಹಾಗೂ ಗ್ಯಾರಂಟಿ ಯೋಜೆನಗಳ ಅನುಷ್ಠಾನ ಅಧಿಕಾರಿಗಳೊಂದಿಗಿನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಜಿಲ್ಲಾಮಟ್ಟದಲ್ಲಿ ಅಧ್ಯಕ್ಷರು, 5 ಉಪಾಧ್ಯಕ್ಷರು 16 ಸದಸ್ಯರು ಮತ್ತು ಜಿಲ್ಲಾ ಪಂಚಾಯತ್ ಸಿಇಒ ಸದಸ್ಯ ಕಾರ್ಯದರ್ಶಿ ಪ್ರಾಧಿಕಾರ ಒಳಗೊಂಡ ಹಾಗೂ ಪ್ರತಿ ತಾಲೂಕಿನಲ್ಲಿ ಅಧ್ಯಕ್ಷರು ಸೇರಿದಂತೆ 14 ಸದಸ್ಯರ ಪ್ರಾಧಿಕಾರ ರಚಿಸಿ ಸರ್ಕಾರ ಅದೇಶಿಸಿದ್ದು, ಪ್ರಾಧಿಕಾರದ ಪ್ರತಿಯೊಬ್ಬ ಸದಸ್ಯರಿಗೆ ಸರ್ಕಾರ ನೀಡಿರುವ ಜವಾಬ್ದಾರಿಯನ್ನು ಅರಿತು ಸರ್ಕಾರ ಮತ್ತು ಸಾರ್ವಜನಿಕರ ನಡುವಿನ ಕೊಂಡಿಯಾಗಿ ಸೇವೆ ಸಲ್ಲಿಸಲು ಸಿಕ್ಕ ಅವಕಾಶವನ್ನು ಬಳಸಿಕೊಂಡು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದರು.
ಸರ್ಕಾರ ನುಡಿದಂತೆ ಪಂಚ ಗ್ಯಾರಂಟಿ ಯೋಜನೆ ಜಾರಿಗೆ ತಂದಿದ್ದು, ಶೇ.90 ರಷ್ಟು ಅನುಷ್ಠಾನಗೊಳಿಸಲಾಗಿದೆ. ಉಳಿದ ಶೇ.10 ರಷ್ಟು ಯೋಜನೆಗಳ ಅನುಷ್ಠಾನಕ್ಕೆ ತಾಂತ್ರಿಕ ಸೇರಿದಂತೆ ಇತರೆ ಕಾರಣಗಳಿಂದ ಅನುಷ್ಠಾನವಾಗದ ಕಾರಣ, ಈ ಅನುಷ್ಠಾನವನ್ನು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರವು ಪೂರ್ಣಗೊಳಿಸಿ ಶೇ. 100 ರಷ್ಟು ಅನುಷ್ಠಾನ ಮಾಡಿ ರಾಜ್ಯದಲ್ಲಿಯೇ ಜಿಲ್ಲೆ ಮುಂಚೂಣಿಯಲ್ಲಿ ಇರುವಂತೆ ಮಾಡುವ ಜವಾಬ್ದಾರಿ ಪ್ರಾಧಿಕಾರದ ಪ್ರತಿಯೊಬ್ಬ ಸದಸ್ಯರ ಮೇಲಿದೆ ಎಂದರು.
ಅನುಷ್ಠಾನ ಕೇವಲ ಮಾತಲ್ಲಿ ಮಾತ್ರವಾಗಿರದೇ ಸಮಾನ್ಯ ಜನರಿಗೆ ಸ್ಪಂದಿಸಿ ಅವರಿಗೆ ಸೌಲಭ್ಯದ ಪ್ರಯೋಜನ ತಲುಪಿಸಿ ಸರ್ಕಾರದ ನಿರೀಕ್ಷೆಯನ್ನು ಈಡೇರಿಸಬೇಕು ಈ ಕಾರ್ಯಕ್ಕೆ ಯೋಜನೆಗಳ ಅನುಷ್ಠಾನದ ಅಧಿಕಾರಿಗಳು ಸಹಕಾರ ನೀಡಲಿದ್ದು, ಎಲ್ಲರು ಸಮನ್ವಯದಿಂದ ಕಾರ್ಯನಿರ್ವಹಿಸಿ ಎಂದರು.
ಪ್ರಾಧಿಕಾರದ ಸದಸ್ಯರು ತಾಲೂಕುವಾರು ಸಭೆ ಸೇರಿ ಸ್ಥಳೀಯ ಅಸಾಯಕರು, ಬಡವರನ್ನು ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಪಂಚ ಗ್ಯಾರಂಟಿ ಯೋಜನೆಗಳ ಸೌಲಭ್ಯ ದೊರಕಿಸಿಕೊಡುವುದರ ಜೊತೆಗೆ ಸರ್ಕಾರದ ಇತರೆ ಯೋಜನೆಗಳ ಸೌಲಭ್ಯವನ್ನು ತಲುಪಿಸುವ ಕೆಲಸ ಮಾಡಿ ಆರ್ಥಿಕವಾಗಿ ಸಬಲರನ್ನಾಗಿಸಲು ಪ್ರಯತ್ನಿಸಬೇಕು ಎಂದರು.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠನ ಪ್ರಾಧಿಕಾರದ ಅಧ್ಯಕ್ಷ ಸತೀಶ ಪಿ ನಾಯ್ಕ ಮಾತನಾಡಿ ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಗ್ಯಾರಂಟಿ ಯೋಜನೆಗಳ ಪ್ರಯೋಜನ ತಲುಪಿದಾಗ ಮಾತ್ರ ಗ್ಯಾರಂಟಿ ಯೋಜನೆಗಳ ಅನುಷ್ಠನ ಪ್ರಾಧಿಕಾರ ಮಾಡಿದ್ದು ಸಾರ್ಥಕವಾಗುತ್ತದೆ ಎಂದರು.
ಕೆಲವು ತಾಂAತ್ರಿಕ ತೊಂದರೆಗಳ ಜೊತೆಗೆ ಗೃಹಲಕ್ಷಿö್ಮÃ ಯೋಜನೆಯ ಸೌಲಭ್ಯ ಪಡೆಯಲು ಹೆಬ್ಬೆರಳಿನ ಗುರುತು ಒಂದೇ ಮಾನದಂಡವಾಗಿರುವದರಿAದ ವಯಸ್ಸಾದದವರಿಗೆ ಯೋಜನೆಯ ಸೌಲಭ್ಯ ಪಡೆಯಲು ಸಾಧ್ಯವಗುತ್ತಿಲ್ಲ. ಹಾಗಾಗಿ Eye Impression ಪರಿಗಣನೆಗೆ ತೆಗೆದುಕೊಳ್ಳುವಂತಾಗಬೇಕು ಎಂದರು.
ಮುಂದಿನ ದಿನಗಳಲ್ಲಿ ಪ್ರತಿ ತಾಲೂಕುವಾರು ಅದಾಲತ್ ಸಭೆ ಆಯೋಜಿಸಿ ಸ್ಥಳೀಯ ಮಟ್ಟದಲ್ಲಿಯೇ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಲಾಗುವುದು ಎಂದರು.
ಜಿಲ್ಲಾಧಿಕಾರಿ ಕೆ ಲಕ್ಷಿö್ಮÃಪ್ರಿಯಾ ಮಾತನಾಡಿ, ಜಿಲ್ಲೆಯಲ್ಲಿ ಈಗಾಗಲೇ ಶೇ.90 ರಷ್ಟು ಯೋಜನೆಗಳ ಅನುಷ್ಠಾನವಾಗಿದ್ದು, ಉಳಿದ ಶೇ.10 ರಷ್ಟು ಪ್ರಕರಣಗಳನ್ನು ಜಂಟಿಯಾಗಿ ಅನುಷ್ಠಾನಗೊಳಿಸುವ ಮೂಲಕ ಯಶಸ್ವಿಗೊಳಿಸಲಾಗುವುದು ಹಾಗೂ ಈ ಯೋಜನೆಗಳ ಅನುಷ್ಠಾನ ಸಂಬAಧ ಸದಸ್ಯರಿಗೆ ತರಬೇತಿ ನೀಡಿ ಅವರಿಗೆ ಜನರಿಗೆ ಮಾಹಿತಿಯನ್ನು ಯಾವ ರೀತಿ ತಿಳಿಸಿಕೊಡಬೇಕು ಎಂಬುದರ ಬಗ್ಗೆ ತಿಳಿಸಲಾಗುವುದು ಎಂದರು.
ಮುAದಿನ ದಿನಗಳಲ್ಲಿ ತಾಲೂಕುವಾರು ಅದಾಲತ್ ಸಭೆ ಕರೆದು ಯಾವುದೇ ಅನುಮಾನವಿದ್ದಲ್ಲಿ ಯೊಜನೆಗಳ ಅನುಷ್ಠಾನ ಅಧಿಕಾರಿಗಳ ಮೂಲಕ ಬಗೆಹರಿಸಲು ಜಿಲ್ಲಾಡಳಿತದ ವತಿಯಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುತ್ತದೆ ಎಂದರು.
ಜಿಲ್ಲಾ ಪಂಚಾಯತ್ ಸಿಇಒ ಈಶ್ವರ್ ಕುಮಾರ್ ಕಾಂದೂ ಮಾತನಾಡಿ ಸದಸ್ಯರಿಗೆ ಹೊಸ ಜವಾಬ್ದಾರಿ ನೀಡಲಾಗಿದ್ದು, ಕೇಲವು ತಾಂತ್ರಿಕ ಕಾರಣಗಳಿಂದ ಶೇ. 100 ರಷ್ಟು ಅನುಷ್ಠಾನ ತಲುಪಲು ಸಾಧ್ಯವಾಗಿಲ್ಲ. ಹೀಗಾಗಿ ಮುಂದಿನ ದಿನಗಳಲ್ಲಿ ತಾಲೂಕು ಮಟ್ಟದ ತರಬೇತಿ ನೀಡಿ ಯೋಜನೆಗಳ ಶೇ. 100 ರಷ್ಟು ಅನುಷ್ಠಾನ ಮಾಡಲು ಎಲ್ಲರು ಕೈಜೋಡಿಸುವಂತೆ ಹೇಳಿದರು.
ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರು, ಸದಸ್ಯರು, ತಾಲೂಕು ಅಧ್ಯಕ್ಷರು, ಮತ್ತು ಗ್ಯಾರಂಟಿ ಯೋಜನೆಗಳ ಅನುಷ್ಠಾನಾಧಿಕಾರಿಗಳು ಮತ್ತಿತರರು ಇದ್ದರು.
ಸಚಿವರಿಂದ ಹೊಲಿಗೆ ಯಂತ್ರ ವಿತರಣೆ
ಡಿ ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಗುರುವಾರ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಭಟ್ಕಳ ತಾಲೂಕಿನ ಬಡ ಹಿಂದುಳಿದ ವರ್ಗಗಳ ಕುಟುಂಬದ ಮಹಿಳೆಯರಿಗೆ ಸ್ವಾವಲಂಭಿಯಾಗಿ ಸ್ವಯಂ ಉದ್ಯೋಗ ಕಂಡುಕೊಳ್ಳಲು ಅರ್ಹ ಪಲಾನುಭವಿಗಳಿಗೆ ಸಾಂಕೇತಿಕವಾಗಿ ಉಚಿತ ಹೊಲಿಗೆ ಯಂತ್ರಗಳನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರೀಯಾ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕುಮಾರ ಕಾಂದೂ ಮತ್ತಿತ್ತರು ಉಪಸ್ಥಿತರಿದ್ದರು.