ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಕಾರವಾರ ಬಸ್ ಘಟಕ ನವೀಕರಣ ಕಟ್ಟಡದ ಶಂಕು ಸ್ಥಾಪನಾ ಸಮಾರಂಭ

ಕಾರವಾರ ಬಸ್ ಘಟಕ ನವೀಕರಣ ಕಟ್ಟಡದ ಶಂಕು ಸ್ಥಾಪನಾ ಸಮಾರಂಭ

Sun, 08 Dec 2024 02:38:37  Office Staff   S O News

ಕಾರವಾರ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಉತ್ತರ ಕನ್ನಡ, ಶಿರಸಿ ವಿಭಾಗದ ಕಾರವಾರ ಬಸ್ ಘಟಕ ನವೀಕರಣ ಕಟ್ಟಡದ ಶಂಕು ಸ್ಥಾಪನಾ ಸಮಾರಂಭವನ್ನು ಡಿ.9 ರಂದು ಮಧ್ಯಾಹ್ನ 12 ಗಂಟೆಗೆ ಕಾರವಾರ ಬಸ್ ಘಟಕದ ಆವರಣದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಉಸ್ತುವಾರಿ ಸಚಿವ ಮಾಂಕಾಳ ಎಸ್ ವೈದ್ಯ ಉದ್ಘಾಟಿಸಲಿದ್ದಾರೆ. ಕರ್ನಾಟಕ ರಾಜ್ಯ ಮಾರ್ಕೆಟಿಂಗ್ ಕಮ್ಯೂನಿಕೇಷನ್ ಅಂಡ್ ಅಡ್ವರ್ಟೈಸಿಂಗ್ ಏಜೆನ್ಸಿ ಲಿಮಿಟೆಡ್ ಅಧ್ಯಕ್ಷ ಸತೀಶ್ ಕೆ. ಸೈಲ್ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ. ದೇಶಪಾಂಡೆ, ವಾ.ಕ.ರ.ಸ.ಸಂಸ್ಥೆಯ ಅಧ್ಯಕ್ಷ ಹಾಗೂ ಕಾಗವಾಡ ಶಾಸಕ ಭರಮಗೌಡ (ರಾಜು)ಅಲಗೌಡ ಕಾಗೆ, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕರಾದ ಶಿವರಾಮ ಹೆಬ್ಬಾರ್, ದಿನಕರ ಕೆ. ಶೆಟ್ಟಿ, ಭೀಮಣ್ಣ ಟಿ. ನಾಯ್ಕ, ವಿಧಾನ ಪರಿಷತ್ ಸದಸ್ಯರಾದ ಎಸ್.ವಿ. ಸಂಕನೂರು, ಶಾಂತಾರಾಮ ಬುಡ್ನ ಸಿದ್ದಿ, ಗಣಪತಿ ಉಳ್ವೇಕರ, ನಗರ ಸಭೆ ಅಧ್ಯಕ್ಷ ರವಿರಾಜ ಅಂಕೋಲೆಕರ, ವಾ.ಕ.ರ.ಸ ಸಂಸ್ಥೆಯ ಉಪಾಧ್ಯಕ್ಷ ಪೀರಸಾಬ್ ಕೌತಾಳ ಸಾರಿಗೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ. ಎನ್.ವಿ. ಪ್ರಸಾದ, ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರು ಸಂಜಯ ಬಿ. ಶೆಟ್ಟೆಣ್ಣನವರ, ಹುಬ್ಬಳ್ಳಿಯ ವಾ.ಕ.ರ.ಸಾ.ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗ ಎಂ, ಮತ್ತಿತರರು ಪಾಲ್ಗೊಳ್ಳಲಿದ್ದಾರೆ.


Share: