ಬೆಂಗಳೂರು, ಏಪ್ರಿಲ್ ೨೯ : ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ರಾಜ್ಯದ ೩೦ ಜಿಲ್ಲೆಗಳಲ್ಳಿನ ೫೪೭೬ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆಯನ್ನು ಘೋಷಿಸಿದ್ದು, ಮತದಾನವನ್ನು ಮೇ ೮ ಮತ್ತು ೧೨ ರಂದು ಎರಡು ಹಂತಗಳಲ್ಲಿ ನಡೆಸಲಿದ್ದು, ಆಯಾ ಪ್ರದೇಶದ ಚುನಾವಣೆ ದಿನಾಂಕಗಳಂದು ಸದರಿ ಕ್ಷೇತ್ರಗಳಲ್ಲಿನ ಎಲ್ಲಾ ಕಾರ್ಖಾನೆಗಳು, ಕೈಗಾರಿಕಾ ಸಂಸ್ಥೆಗಳು ಮತ್ತು ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಮತದಾನದ ಕ್ಷೇತ್ರಗಳಲ್ಲಿ ಸಂವಿಧಾನಾತ್ಮಕ ಹಕ್ಕಾದ ಮತ ಚಲಾಯಿಸಲು ಅನುಕೂಲವಾಗುವಂತೆ ಕಾರ್ಮಿಕರಿಗೆ ಅನುಮತಿ ನೀಡಬೇಕೆಂದು ಮಾಲೀಕರು/ನಿಯೋಜಕರಿಗೆ ಕಾರ್ಮಿಕ ಆಯುಕ್ತರು ಸೂಚಿಸಿದ್ದಾರೆ.
ಮೇ ೮ ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿತ್ರದುರ್ಗ, ದಾಣಗೆರೆ, ಕೋಲಾರ, ಚಿಕ್ಕಬಳ್ಳಾಪುರ, ಶಿವಮೊಗ್ಗೆ, ತುಮಕೂರು, ಬೀದರ್, ಬಳ್ಳಾರಿ, ಗುಲ್ಬರ್ಗಾ, ಯಾದಗಿರಿ, ರಾಯಚೂರು , ಕೊಪ್ಪಳ ಜಿಲ್ಲೆಗಳು ಹಾಗೂ ಉಡುಪಿ ಜಿಲ್ಲೆಯ ಉಡುಪಿ ಮತ್ತು ಕಾರ್ಕಳ ತಾಲ್ಲೂಕುಗಳಲ್ಲಿ ಮತದಾನ ನಡೆಯಲಿದೆ.