ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಕಾರವಾರ ಶಾಸಕ ಸತೀಶ್ ಸೈಲ್​ಗೆ 7 ವರ್ಷ ಜೈಲು, 9 ಕೋಟಿ ದಂಡ: ಅಕ್ರಮ ಅದಿರು ಸಾಗಾಟ ಪ್ರಕರಣದಲ್ಲಿ ತೀರ್ಪು

ಕಾರವಾರ ಶಾಸಕ ಸತೀಶ್ ಸೈಲ್​ಗೆ 7 ವರ್ಷ ಜೈಲು, 9 ಕೋಟಿ ದಂಡ: ಅಕ್ರಮ ಅದಿರು ಸಾಗಾಟ ಪ್ರಕರಣದಲ್ಲಿ ತೀರ್ಪು

Sat, 26 Oct 2024 22:56:52  Office Staff   SOnews

ಬೆಂಗಳೂರು: ಬೇಲೆಕೇರಿ ಬಂದರಿನಿಂದ ಅದಿರು ಅಕ್ರಮ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್​ಗೆ 7 ವರ್ಷ ಜೈಲು ಶಿಕ್ಷೆ ಮತ್ತು 9 ಕೋಟಿ ದಂಡ ವಿಧಿಸಿದೆ.

ಅಕ್ಟೋಬರ್ 24ರಂದು ಸೈಲ್​ ದೋಷಿ ಎಂದು ತೀರ್ಪು ನೀಡಿದ ನ್ಯಾಯಾಲಯ, ಇಂದು ಶಿಕ್ಷೆಯನ್ನು ಪ್ರಕಟಿಸಿತು. ದಂಡದ 9 ಕೋಟಿ ಹಣವನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಲು ನ್ಯಾಯಾಲಯ ಆದೇಶಿಸಿದೆ.

ಅದಿರು ನಾಪತ್ತೆ ಪ್ರಕರಣದಲ್ಲಿ ಸತೀಶ್ ಸೈಲ್​ಗೆ ನಾಲ್ಕು ಕೇಸುಗಳಲ್ಲಿ ಶಿಕ್ಷೆ ವಿಧಿಸಲಾಗಿದೆ. ಒಳಸಂಚು ಪ್ರಕರಣದಲ್ಲಿ 5 ವರ್ಷ ಜೈಲು, ವಂಚನೆ ಪ್ರಕರಣದಲ್ಲಿ 7 ವರ್ಷ ಜೈಲು, ಹಾಗೂ ಕಳ್ಳತನ ಪ್ರಕರಣದಲ್ಲಿ 2 ವರ್ಷ ಜೈಲು ಶಿಕ್ಷೆ ನೀಡಲಾಗಿದೆ. 2 ವರ್ಷಕ್ಕಿಂತ ಹೆಚ್ಚಿನ ಶಿಕ್ಷೆ ಆದ ಕಾರಣ, ಸೈಲ್​ ಅವರ ಶಾಸಕ ಸ್ಥಾನವೂ ಅನರ್ಹಗೊಳ್ಳುವ ಸಾಧ್ಯತೆಯಿದೆ.


Share: