ಮೈಸೂರು,ಫೆ.೨: ರಾಜ್ಯದಲ್ಲಿ ನಡೆದಿರುವ ಚರ್ಚ್‌ಗಳ ಮೇಲಿನ ದಾಳಿಯಲ್ಲಿ ಸಂಘಪರಿವಾರ ಸಂಘಟನೆಗಳು, ಆಯಾ ಜಿಲ್ಲಾಡಳಿತ ಮತ್ತು ಪೊಲೀಸರು ಶಾಮೀಲಾಗಿದ್ದಾರೆ ಎಂಬುದಾಗಿ ನ್ಯಾಯಮೂರ್ತಿ ಸೋಮಶೇಖರ್ ಆಯೋಗ ಸರಕಾರಕ್ಕೆ ಸಲ್ಲಿಸಿರುವ ಮಧ್ಯಂತರ ವರದಿ ಹಿನ್ನೆಲೆಯಲ್ಲಿ ಬಿಜೆಪಿ ಸರಕಾರವನ್ನು ತಕ್ಷಣವೇ ವಿಸರ್ಜಿಸಬೇಕು ಎಂದು ವಿಧಾನಸಭೆ ವಿಪಕ್ಷ ನಾಯಕ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ನಗರದ ಪತ್ರಕರ್ತರ ಭವನದಲ್ಲಿ ಇಂದು ತುರ್ತು ಪತ್ರಿಕಾಗೋಷ್ಠಿ ಕರೆದು ಮಾತನಾಡಿದ ಅವರು, ಈ ವರದಿಯಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರವರ ಬಣ್ಣ ಬಯಲಾಗಿದೆ. ಸಂಘಪರಿವಾರಕ್ಕೆ ಕುಮ್ಮಕ್ಕು ನೀಡುತ್ತಿರುವ ಅವರು ಯಾವುದೇ ಕಾರಣಕ್ಕೂ ಆಡಳಿತ ನಡೆಸಲು ಅರ್ಹರಲ್ಲ ಎಂದು ಕಟುವಾಗಿ ಟೀಕಿಸಿದರು.
ಇಂತಹ ಸಮಾಜ ಘಾತುಕ ಘಟನೆಯಲ್ಲಿ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದರೆ ಅದಕ್ಕೆ ಇಡೀ ಸರಕಾರವೇ ಹೊಣೆಯಾಗುತ್ತದೆ. ಚರ್ಚ್‌ಗಳ ಮೇಲೆ ದಾಳಿ ನಡೆಸಿ ಅಲ್ಪಸಂಖ್ಯಾತರಲ್ಲಿ ಭೀತಿ ಸೃಷ್ಟಿಸಿರುವ ಸಂಘಪರಿವಾರ ಸಂಘಟನೆಗಳಾದ ಬಜರಂಗದಳ ಮತ್ತು ಶ್ರೀರಾಮಸೇನೆ ಸಂಘಟನೆಗಳನ್ನು ನಿಷೇಧಿಸಬೇಕು. ಈ ಬಗ್ಗೆ ಕೇಂದ್ರ ಸರಕಾರ ಕ್ರಮಕೈಗೊಳ್ಳಬೇಕು. ಚರ್ಚ್ ದಾಳಿ ನಡೆದ ಸಂದರ್ಭಗಳಲ್ಲಿ ಯಡಿಯೂರಪ್ಪ ಮತ್ತು ಗೃಹ ಸಚಿವ ವಿ.ಎಸ್. ಆಚಾರ್ಯ ಈ ಘಟನೆ ಹಿಂದೆ ವಿರೋಧ ಪಕ್ಷಗಳ ಪಿತೂರಿ ಇದೆ ಎಂದು ಬೊಬ್ಬೆ ಹೊಡೆಯುತ್ತಿದ್ದರು. ಈಗ ಸೋಮಶೇಖರ್ ವರದಿಯ ಕೆಲ ಅಂಶಗಳಿಂದ ವಾಸ್ತವ ಬಹಿರಂಗಗೊಂಡಿದೆ ಎಂದರು.
ಸಂಘಪರಿವಾರ ಸಂಘಟನೆಗಳನ್ನು ರಕ್ಷಿಸುವ ಸಲುವಾಗಿ ಸುಳ್ಳು ಹೇಳಿಕೆ ನೀಡುವ ಮೂಲಕ ಸತ್ಯವನ್ನು ಮುಚ್ಚಿಹಾಕುವ ಸರಕಾರದ ಪ್ರಯತ್ನ ಅತ್ಯಂತ ಹೇಯವಾದುದು. ಅಲ್ಪಸಂಖ್ಯಾತರು ಮತ್ತು ಹಿಂದೂಗಳ ನಡುವೆ ದ್ವೇಷ ಭಾವನೆ ಬಿತ್ತುವುದು ಮತ್ತು ಅದನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳಲು ಹುನ್ನಾರ ನಡೆಸಿರುವ ಯಡಿಯೂರಪ್ಪ ಒಂದೇ ಒಂದು ಸೆಕೆಂಡ್ ಕೂಡ ಅಧಿಕಾರದಲ್ಲಿ ಮುಂದುವರಿಯಲು ಯೋಗ್ಯರಲ್ಲ ಎಂದು ಗುಡುಗಿದರು.
ಆದರೆ ಅಧಿಕಾರ ವ್ಯಾಮೋಹದಲ್ಲಿ ಕುರುಡಾಗಿರುವ ಯಡಿಯೂರಪ್ಪ ರಾಜೀನಾಮೆ ಕೊಡುವುದಿಲ್ಲ ಎಂದ ಅವರು, ಚರ್ಚ್ ದಾಳಿ ಸಂಬಂಧ ರಾಜ್ಯಪಾಲರು ನೀಡಿದ ಸಲಹೆಗೆ ಮುಖ್ಯಮಂತ್ರಿಗಳು ರಾಜಕೀಯ ಲೇಪ ಬಳಿದು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಪ್ರಯತ್ನ ಮಾಡಿದರು. ಸಂವಿಧಾನದ ಆಶಯಗಳಿಗೆ ಧಕ್ಕೆ ತರುವ ರೀತಿಯಲ್ಲಿ ಆಡಳಿತ ನಡೆಸುತ್ತಿರುವ ಸರಕಾರವನ್ನು ಕೂಡಲೇ ವಜಾ ಮಾಡಬೇಕು ಎಂದು ಅವರು ಒತ್ತಾಯಿಸಿದರು. ಆಯೋಗದ ಮಧ್ಯಂತರ ವರದಿಯಲ್ಲಿ ಚರ್ಚ್‌ಗಳ ಮೇಲಿನ ದಾಳಿಗೆ ಮತಾಂತರ ಕಾರಣ ಇರಬಹುದು ಎಂದು ಹೇಳಲಾಗಿದೆ. ಆದರೆ ಘಟನೆ ನಡೆದಿರುವ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಬಳ್ಳಾರಿ, ಬೆಂಗಳೂರು, ಧಾರವಾಡ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಬಲವಂತ ಮತಾಂತರ ಆಗಿಲ್ಲ ಎಂಬ ಅಂಶವನ್ನು ಕೂಡ ಅದರಲ್ಲಿ ಸ್ಪಷ್ಟಪಡಿಸಲಾಗಿದೆ ಎಂದು ಹೇಳಿದರು.
ಇತ್ತೀಚೆಗೆ ಮೈಸೂರಿನ ಹಿನಕಲ್ ಚರ್ಚ್ ಮೇಲೆ ನಡೆದ ದಾಳಿಯಲ್ಲಿ ವಿರೋಧ ಪಕ್ಷಗಳ ಕೈವಾಡ ಇದೆ. ಸರಕಾರದ ಹೆಸರು ಕೆಡಿಸಲು ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಸಂಚು ರೂಪಿಸಿವೆ ಎಂದು ಯಡಿಯೂರಪ್ಪ ಹೇಳಿಕೆ ನೀಡಿದ್ದರು. ಈಗ ಸೋಮಶೇಖರ್ ಆಯೋಗದ ಮಧ್ಯಂತರ ವರದಿ ಪ್ರಕಾರ ಆ ಆರೋಪದಲ್ಲಿ ಹುರುಳಿಲ್ಲ ಎಂಬುದು ಸ್ಪಷ್ಟವಾಗಿದೆ ಎಂದು ಪ್ರತಿಪಾದಿಸಿದರು.
ಜನರ ಕ್ಷಮೆ ಯಾಚಿಸಿ ರಾಜೀನಾಮೆ ನೀಡಲಿ: ಮುಖ್ಯಮಂತ್ರಿ ಯಡಿಯೂರಪ್ಪ ನಿನ್ನೆ ಬಳ್ಳಾರಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿ, ಸರಕಾರವನ್ನು ಟೀಕಿಸುವ ರಾಜಕೀಯ ನಾಯಕ ‘ನಾಲಿಗೆಯನ್ನು ಕಿತ್ತುಹಾಕಿ’ ಎಂದು ಜನರಿಗೆ ಕರೆ ನೀಡಿದ್ದಾರೆ. ಮೈಸೂರು ಚರ್ಚ್ ಮೇಲಿನ ದಾಳಿ ಸಂದರ್ಭದಲ್ಲಿ ‘ಕಿಡಿಗೇಡಿಗಳ ಕೈ ಕತ್ತರಿಸಿ’ ಎಂದು ಹೇಳಿದ್ದಾರೆ. ಇಂತಹ ಹೇಳಿಕೆಗಳ ಮೂಲಕ ರಾಜ್ಯದಲ್ಲಿ ಶಾಂತಿ ಕದಡುವ ಪ್ರಯತ್ನ ಅವರದ್ದಾಗಿದೆ ಎಂದು ಕಿಡಿಕಾರಿದರು.
ಮತ್ತೊಂದೆಡೆ ವಿಪಕ್ಷಗಳಿಗೆ ಸಂಸ್ಕಾರವೇ ಇಲ್ಲ ಎಂದು ಹೇಳಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಕೆ.ಎಸ್. ಈಶ್ವರಪ್ಪರವರಿಗೆ ಮುಖ್ಯಮಂತ್ರಿಗಳ ಮಾತುಗಳು ಯಾರಿಗೆ ಸಂಸ್ಕೃತಿ, ಸಂಸ್ಕಾರಗಳು ಇಲ್ಲ ಎಂಬುದನ್ನು ಖಚಿತಪಡಿಸಿವೆ. ಈ ಸರಕಾರಕ್ಕೆ ನೀತಿ, ನಿಯತ್ತುಗಳು ಇಲ್ಲವೇ ಇಲ್ಲ. ಇಂತಹ ಅಸಂಬದ್ಧ ಪ್ರಲಾಪಗಳಿಂದ ಜನರನ್ನು ವಂಚಿಸಲು ಪ್ರಯತ್ನಿಸುತ್ತಿರುವ ಮುಖ್ಯಮಂತ್ರಿಗಳು ಜನತೆ ಹಾಗೂ ವಿಪಕ್ಷಗಳ ಕ್ಷಮೆ ಯಾಚಿಸಬೇಕು. ಅಲ್ಲದೆ ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಗೌರವದಿಂದ ಕೆಳಗಿಳಿಯಬೇಕು ಎಂದು ನುಡಿದರು.
ಜನಪರ ಆಡಳಿತ ನೀಡುವಲ್ಲಿ ಸಂಪೂರ್ಣ ವಿಫಲವಾಗಿರುವ ಸರಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವ ಬಗ್ಗೆ ಚಿಂತನೆ ನಡೆದಿದೆ. ಕೆಪಿಸಿಸಿ ಅಧ್ಯಕ್ಷರೊಡನೆ ಚರ್ಚಿಸಿ ಶೀಘ್ರದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಶಾಸಕ ಎಂ. ಸತ್ಯನಾರಾಯಣ, ಮಾಜಿ ಶಾಸಕ ಮಂಚನಹಳ್ಳಿ ಮಹದೇವ್ ಮತ್ತು ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಸಮಿತಿ ಅಧ್ಯಕ್ಷ ಎಚ್.ಎ. ವೆಂಕಟೇಶ್ ಉಪಸ್ಥಿತರಿದ್ದರು