ಇಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜರುಗಿದ ಸಾರಿಗೆ ಅದಾಲತ್ ನಲ್ಲಿ ಮಾತನಾಡಿದ ಅವರು ಈ ಎಚ್ಚರಿಕೆಯನ್ನು ನೀಡಿದ್ದು, ಬಸ್ಸು ಸಿಬಂದಿಗಳು ಪ್ರಯಾಣಿಕರೊಂದಿಗೆ ಸೌಜನ್ಯದೊಂದಿಗೆ ವರ್ತಿಸುವಂತೆ ಸೂಚನೆ ನೀಡಿದರು. ಮೋಬೈಲ್ ಬಳಕೆ, ಅಥವಾ ಇತರ ಪ್ರಯಾಣಿಕರಿಗೆ ತೊಂದರೆ ಆಗುವ ಯಾವುದೇ ದೂರುಗಳನ್ನು ಫೊಟೊ ದಾಖಲೆ ಸಮೇತ ಸಾರ್ವಜನಿಕರು ದೂರು ನೀಡಿದರೆ ಅಂತವರ ಮೇಲೆ ಕಟ್ಟು ನಿಟ್ಟಿನ ಮತ್ತು ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಖಾಸಗಿ ಬಸ್ ಚಾಲಕರು ಹಾಗೂ ನಿರ್ವಾಹಕರು ಕಡ್ಡಾಯವಾಗಿ ಗುರುತುಪತ್ರ ಧರಿಸಿ ವಾಹನ ಚಲಾಯಿಸಬೇಕೆಂದು ಸೂಚಿಸಿದ ಜಿಲ್ಲಾಧಿಕಾರಿಗಳು, ಪರವಾನಿಗೆ ಪಡೆದ ಬಸ್ಸುಗಳು ತಮ್ಮ ಟ್ರಿಪ್ ಗಳನ್ನು ಕಡಿತಗೊಳಿಸದೆ ಪರವಾನಿಗೆ ಪಡೆದ ಕೊನೆಯ ನಿಲ್ದಾಣದವರೆಗೆ ಸಂಚರಿಸಿ ಕೊನೆಯ ನಿಲ್ದಾಣದಲ್ಲಿ ಲಾಗ್ ಪುಸ್ತಕವನ್ನು ಇರಿಸಿ ಅದರಲ್ಲಿ ಸಹಿ ಮಾಡುವಂತೆ ಸೂಚನೆ ನೀಡಿದರು.ಜೊತೆಗೆ ಬಸ್ಸನ್ನೇರುವ ಸಂದರ್ಭಗಳಲ್ಲಿ ಟಯರ್ ಗಳನ್ನು ಅಡ್ಡ ಹಾಕುವ ಬಗ್ಗೆ ಪರಿಶೀಲಿಸಲು ಪೊಲೀಸ್ ಇಲಾಖೆಗೆ ಸೂಚಿಸಿದರು.
