ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಕಾರವಾರ: ಕಾನೂನು ಪದವಿಧರರಿಗೆ ಶಿಷ್ಯ ವೇತನ: ಅರ್ಜಿ ಆಹ್ವಾನ

ಕಾರವಾರ: ಕಾನೂನು ಪದವಿಧರರಿಗೆ ಶಿಷ್ಯ ವೇತನ: ಅರ್ಜಿ ಆಹ್ವಾನ

Thu, 20 Jun 2024 03:29:32  Office Staff   S O News

ಕಾರವಾರ: 2024-25 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ ವೃತ್ತಿ ತರಬೇತಿ ಅವಧಿಯಲ್ಲಿ ಶಿಷ್ಯ ವೇತನ ಪಾವತಿಸಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ. ಆಸಕ್ತ ಪರಿಶಿಷ್ಟ ಜಾತಿಯ ಕಾನೂನು ಪದವಿ ಪಡೆದ ಅಭ್ಯರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್‌ಸೈಟ್: www.sw.kar.nic.in ನಲ್ಲಿಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ಹಾರ್ಡಕಾಫಿ ಹಾಗೂ ಅರ್ಹ ದಾಖಲೆಗಳನ್ನು ಆಯಾ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರುಗಳಿಗೆ ನೀಡುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share: