ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಕಾರವಾರ: ಗ್ರಾಮ ಆರೋಗ್ಯ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ; ಈಶ್ವರ್ ಕಾಂದೂ

ಕಾರವಾರ: ಗ್ರಾಮ ಆರೋಗ್ಯ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ; ಈಶ್ವರ್ ಕಾಂದೂ

Wed, 18 Sep 2024 03:59:50  Office Staff   S O News

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಗ್ರಾಮ ಆರೋಗ್ಯ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕಾಂದೂ ಹೇಳಿದರು.

ಅವರು ಇತ್ತಿಚಿಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಗ್ರಾಮ ಆರೋಗ್ಯ ಯೋಜನೆಗೆ ಸಂಬAಧಿದAತೆ , ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಗ್ರಾಮ ಆರೋಗ್ಯ ಕಾರ್ಯಕ್ರಮದ ಜಿಲ್ಲಾಮಟ್ಟದ ತರಬೇತಿದಾರರ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. 

ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯ ತಪಾಸಣೆ ಮತ್ತು ಇತರ ಆರೋಗ್ಯ ಸೇವೆ ವಿತರಣೆಯಲ್ಲಿನ ಅಂತರವನ್ನು ಕಡಿಮೆ ಮಾಡುವ ಉದ್ದೇಶವನ್ನು ಹೊಂದಿದ್ದು, ಸಾಂಕ್ರಾಮಿಕವಲ್ಲದ ರೋಗಗಳು, ಕ್ಷಯರೋಗ, ಮಾನಸಿಕ ಆರೋಗ್ಯ, ಅನಿಮಿಯಾ, ಅಪೌಷ್ಟಿಕತೆ, ಮುಟ್ಟಿನ ನೈರ್ಮಲ್ಯ, ಬಾಲ್ಯವಿವಾಹ ತಡೆಗಟ್ಟುವಿಕೆ ಸೇರಿದಂತೆ ಸಮುದಾಯಗಳ ಆರೋಗ್ಯದ ಅಗತ್ಯತೆಗಳನ್ನು ವಿವಿಧ ಇಲಾಖೆಗಳ ಸಮನ್ವಯತೆ ಮತ್ತು ಒಗ್ಗೂಡಿಸುವಿಕೆಯ ಮೂಲಕ ಅನುಷ್ಠಾನಗೋಳಿಸಲಾಗಿದೆ ಎಂದರು. 

ಇದೇ ಸಂದರ್ಭದಲ್ಲಿ ಪುಸ್ತಕ ಮತ್ತು ಕ್ಲಿಪ್ ಚಾರ್ಟ್ ಬಿಡುಗಡೆ ಮಾಡಿದರು.

ಕಾರ್ಯಗಾರದಲ್ಲಿ ಜಿ. ಪಂ. ಉಪ ಕಾರ್ಯದರ್ಶಿ (ಅಭಿವೃದ್ಧಿ) ಪ್ರಕಾಶ್ ಹಾಲನ್ನವರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ವಿರೂಪಾಕ್ಷ ಗೌಡ .ಪಿ. ಪಾಟೀಲ್, ಜಿಲ್ಲಾ ಸರ್ವೇಕ್ಕ್ಷಣಾಧಿಕಾರಿ ಡಾ. ಅರ್ಚನಾ, ಜಿಲ್ಲಾ ಕ್ಷಯ ರೋಗ ನಿಯಂತ್ರಣ ಅಧಿಕಾರಿ ಡಾ. ಹರ್ಷ ವೆಂಕಟೇಶ್, ಜಿಲ್ಲೆಯ ಎಲ್ಲಾ ಸಹಾಯಕ ನಿರ್ದೇಶಕರು ಪಂಚಾಯತ್ ರಾಜ್ ಇಲಾಖೆ ಹಾಗೂ ಎಲ್ಲ ತಾಲೂಕ ಆರೋಗ್ಯ ಅಧಿಕಾರಿಗಳು, ಎಸ್. ಐ .ಆರ್. ಡಿ ಅಬ್ದುಲ್ ನಜೀರ್ ಸಾಬ್ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಎಲ್ಲ ತಾಲೂಕಿನ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು. ಶಿಶು ಅಭಿವೃದ್ಧಿ ಮೇಲ್ವಿಚಾರಕಿಯರು. ಬಿ.ಹೆಚ್.ಇ.ಓ. ಸೀನಿಯರ್ ಎಚ್.ಐ.ಒ ಭಾಗವಹಿಸಿದ್ದರು. 


Share: