ಕಾರವಾರ: ಲೋಕಸಭಾ ಸಾರ್ವತ್ರಿಕ ಚುನಾವಣೆ 2024ಕ್ಕೆ ಸಂಬAಧಿಸಿದAತೆ, ಚುನಾವಣಾ ಕರ್ತವ್ಯ ನಿರತ ಸಿಬ್ಬಂದಿಗಳಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಚುನಾವಣಾ ಮಾರ್ಗಸೂಚಿಯನ್ವಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೌಲಭ್ಯ ಕೇಂದ್ರವನ್ನು ಮತ್ತು ಎಲ್ಲಾ ಸಹಾಯಕ ಚುನಾವಣಾಧಿಕಾರಿಗಳ ವಿಧಾನಸಭಾ ಕ್ಷೇತ್ರವಾರು ನಡೆಯುವ ತರಬೇತಿ ಕೇಂದ್ರದಲ್ಲಿ ಸೌಲಭ್ಯ ಕೇಂದ್ರವನ್ನು ಸ್ಥಾಪಿಸಲಾಗಿದ್ದು, ಸದ್ರಿ ಮತದಾರರಿಗೆ ಮೇ 2 ರಂದು ಸೌಲಭ್ಯ ಕೇಂದ್ರದಲ್ಲಿ ಹಾಜರಿದ್ದು ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.