ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಕಾರವಾರ: ಜಿಲ್ಲಾ ಪಿ.ಸಿ & ಪಿ.ಪಿ.ಎನ್.ಡಿ.ಟಿ ಕಾಯ್ದೆಯ ಜಿಲ್ಲಾ ಸಲಹಾ ಸಮಿತಿ ಸಭೆ

ಕಾರವಾರ: ಜಿಲ್ಲಾ ಪಿ.ಸಿ & ಪಿ.ಪಿ.ಎನ್.ಡಿ.ಟಿ ಕಾಯ್ದೆಯ ಜಿಲ್ಲಾ ಸಲಹಾ ಸಮಿತಿ ಸಭೆ

Sun, 29 Sep 2024 02:43:25  Office Staff   S O News

ಕಾರವಾರ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನೀರಜ್ ಮತ್ತು ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ಅನ್ನಪೂರ್ಣ ವಸ್ತçದ ಉಪಸ್ಥಿತಿಯಲ್ಲಿ ಹಾಗೂ ಜಿಲ್ಲಾ ಸಲಹಾ ಸಮಿತಿಯ ಸದಸ್ಯರಲ್ಲಿ ಒಬ್ಬರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿ ಜಿಲ್ಲಾ ಪಿ.ಸಿ & ಪಿ.ಪಿ.ಎನ್.ಡಿ.ಟಿ ಕಾಯ್ದೆಯ ಜಿಲ್ಲಾ ಸಲಹಾ ಸಮಿತಿ ಸಭೆಯು ಶುಕ್ರವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿಯಲ್ಲಿ ನಡೆಯಿತು.

ಸಭೆಯಲ್ಲಿ ಪಿ.ಸಿ.ಪಿ.ಎನ್.ಡಿ.ಟಿ ಅನುಷ್ಠಾನ, ಹೊಸ ನೋಂದಣಿ ಮತ್ತು ನವೀಕರಣ ಕುರಿತಂತೆ ಸಲ್ಲಿಕೆಯಾದ ಅರ್ಜಿಗಳನ್ನು ಹಾಗೂ ಬಂದಿರುವ ದೂರಿನ ಕುರಿತು ಚರ್ಚಿಸಿ ಸಲಹೆ ಪಡೆದು ಪಿ.ಸಿ.ಪಿ.ಎನ್.ಡಿ.ಟಿ ಸಕ್ಷಮ ಪ್ರಾಧಿಕಾರಿಗಳ ಅನುಮೋದನೆ ಕೋರಿ ಕಡತವನ್ನು ಮಂಡಿಸಲು ತೀರ್ಮಾನಿಸಲಾಯಿತು ಹಾಗೂ ಇತರ ವಿಷಯಗಳ ಬಗ್ಗೆ ಚರ್ಚಿಸಲಾಯಿತು. 

ಈ ಸಂದರ್ಭದಲ್ಲಿ ಸಮಿತಿ ಸದಸ್ಯರಾದ ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮಕ್ಕಳ ತಜ್ಞ ಡಾ. ವಿಶ್ವನಾಥ ಮಾಚಕನೂರು, ಮತ್ತು ಶ್ರೀಕಾಂತ ಎಂ ನಾಯ್ಕ, ಮತ್ತಿತರರು ಇದ್ದರು.


Share: