ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಕಾರವಾರ: ಜೀತ ಪದ್ದತಿ ರದ್ದತಿ ದಿನಾಚರಣೆ ಜಾಥಾ

ಕಾರವಾರ: ಜೀತ ಪದ್ದತಿ ರದ್ದತಿ ದಿನಾಚರಣೆ ಜಾಥಾ

Sat, 10 Feb 2024 23:16:18  Office Staff   S O News

ಕಾರವಾರ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಕೀಲರ ಸಂಘ ಹಾಗೂ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಜೀತ ಪದ್ದತಿ ರದ್ದತಿ ದಿನಾಚರಣೆ ಪ್ರಯುಕ್ತ ನಡೆದ ಜಾಥಾಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ನ್ಯಾ. ಡಿ.ಎಂ.ವಿಜಯಕುಮಾರ್ ಚಾಲನೆ ನೀಡಿದರು.

ಇದೇ ಸಂದರ್ಭದಲ್ಲಿ ಜೀತ ಪದ್ದತಿ ರದ್ದತಿ ಕುರಿತಂತೆ ಪ್ರತಿಜ್ಞಾವಿಧಿ ಭೋಧಿಸಲಾಯಿತು.
ಕಾರ್ಯಕ್ರಮದಲ್ಲಿ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಿ.ಎಲ್. ಮಾಯಾಣ್ಣ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸಿಜೆಎಮ್ ರೇಷ್ಮಾ ಜೆ ರೋಡ್ರಿಗಸ್, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರೇಣುಕಾ ಡಿ ರಾಯ್ಕರ್, ಅಪರಜಿಲ್ಲಾಧಿಕಾರಿ ಪ್ರಕಾಶ್‌ರಾಜಪೂತ್, ತಹಶೀಲ್ದಾರ ನಿಶ್ಚಲ್ ನರೋನಾ, ಪೌರಾಯುಕ್ತ ಚಂದ್ರಮೌಳಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ವಕೀಲರು ಭಾಗವಹಿಸಿದ್ದರು.


Share: