ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಕಾರವಾರ: ನ.9 ರಂದು ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮ

ಕಾರವಾರ: ನ.9 ರಂದು ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮ

Wed, 08 Nov 2023 07:34:37  Office Staff   S O News

ಕಾರವಾರ: ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಗ್ರಾಮ ಪಂಚಾಯತಿಗಳಲ್ಲಿ ಉದ್ಯೋಗ ಖಾತ್ರಿ(ನರೇಗಾ) ಯೋಜನೆಯಡಿಯಲ್ಲಿ ಭಾದಿತರಾದ ಫಲಾನುಭವಿಗಳಿಗೆ ಸಂಬಂಧಪಟ್ಟ ವಿವಾದಗಳು ಇದ್ದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ತಾಲೂಕು ಕಾನೂನು ಸೇವೆಗಳ ಸಮಿತಿಗಳಿಗೆ ಖುದ್ದಾಗಿ ಬಂದು ಅರ್ಜಿಯನ್ನು ನೀಡಬಹುದು.

ಸದರಿ ಅರ್ಜಿಯನ್ನು ಪರಿಶೀಲಿಸಿ ಸಂಬಂಧಿಸಿದ ಇಲಾಖೆ ಪ್ರಾಧಿಕಾರಗಳ ಅಧಿಕಾರಗಳನ್ನು ಕರೆಯಿಸಿ ಲೋಕ ಅದಾಲತ್‍ನಲ್ಲಿ ಇತ್ಯಾರ್ಥ ಪಡಿಸಲಾಗುವುದು ಅಥವಾ ಅವಶ್ಯಕತೆಯಿದ್ದಲ್ಲಿ ಕಾನೂನು ನೆರವು ನೀಡಲಾಗುವುದು. ಅದರಂತೆ ನ.9 ರಂದು ಜಿಲ್ಲಾದಂತ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಉದ್ಯೋಗ ಖಾತ್ರಿ(ನರೇಗಾ) ಯೋಜನೆಯಡಿಯಲ್ಲಿ ಭಾದಿತರಾದ ಸಂತ್ರಸ್ತರು ಲೋಕ ಅದಾಲತ್ ನ ಪ್ರಯೋಜನ ಪಡೆದುಕೊಳ್ಳಬೇಕಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿ ರೇಣುಕಾ ಡಿ. ರಾಯ್ಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share: