ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಕಾರವಾರ: ಮತಗಟ್ಟೆ ಸಿಬ್ಬಂದಿಯ ಆರೋಗ್ಯ ಕಾಳಜಿಗೆ ಆರೋಗ್ಯ ಕಿಟ್

ಕಾರವಾರ: ಮತಗಟ್ಟೆ ಸಿಬ್ಬಂದಿಯ ಆರೋಗ್ಯ ಕಾಳಜಿಗೆ ಆರೋಗ್ಯ ಕಿಟ್

Fri, 03 May 2024 04:08:25  Office Staff   S O News

ಕಾರವಾರ: ಲೋಕಸಭಾ ಸಾರ್ವತ್ರಿಕ ಚುನಾವಣೆಗೆ 2024 ಕ್ಕೆ ಸಂಬಂಧಿಸದಂತೆ  ಜಿಲ್ಲೆಯಲ್ಲಿ ಮೇ 7 ರಂದು ನಡೆಯುವ ಮತದಾನ ದಿನದಂದು ಮತಗಟ್ಟೆಗಳಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗೆ ಈಗಾಗಲೇ ರಾಜ್ಯದಲ್ಲೇ ಪ್ರಥಮ ಬಾರಿಗೆ ದೈನಂದಿನ ಬಳಕೆಯ ವಸ್ತುಗಳನ್ನು ಒಳಗೊಂಡ ವಿಶೇಷ ಕಿಟ್ ಸಿದ್ದಪಡಿಸಿರುವ ಜಿಲ್ಲಾಡಳಿತ, ಸಿಬ್ಬಂದಿಗಳ ಆರೋಗ್ಯದ ವಿಷಯದಲ್ಲೂ ಸಹ ಹೆಚ್ಚಿನ ಮುನ್ನೆಚ್ಚರಿಕೆ ವಹಿಸಿದ್ದು, ಇದಕ್ಕಾಗಿ ತುರ್ತು ಬಳಕೆಗೆ ಅವಶ್ಯಕವಿರುವ ಅಗತ್ಯ ಔಷಧಗಳನ್ನು ಹೊಂದಿರುವ ಮೆಡಿಸಿನ್ ಕಿಟ್‌ಗಳನ್ನೂ ಕೂಡಾ ಸಿದ್ದಪಡಿಸಿದೆ.

ಪ್ರಸ್ತುತ ರಾಜ್ಯಾದ್ಯಂತ ಉಷ್ಣ ವಾತಾವರಣ ಹೆಚ್ಚಾಗಿದ್ದು, ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಸಿಬ್ಬಂದಿಗಳು ಮತಗಟ್ಟೆಗಳಿಗೆ ತಲುಪಿದ ಮೇಲೆ ಮತ್ತು ಮತದಾನದ ದಿನದಂದು ಯಾವುದೇ ಅನಾರೋಗ್ಯ ಸಮಸ್ಯೆಗಳಿಗೆ ಒಳಗಾಗದಂತೆ ಮುನ್ನೆಚ್ಚರಿಕೆಯಾಗಿ ಓ.ಆರ್.ಎಸ್. ಪೊಟ್ಟಣಗಳು, ಜ್ವರ,

ಚುನಾವಣಾ ಕಾರ್ಯದಲ್ಲಿ ಮತದಾನವು ಅತ್ಯಂತ ಬಹುಮುಖ್ಯ ಘಟ್ಟ. ಮತದಾನದ ದಿನದಂದು ಮತಗಟ್ಟೆಯಲ್ಲಿ ಕರ್ತವ್ಯ ನಿರ್ವಹಿಸುವ ಚುನಾವಣಾ ಸಿಬ್ಬಂದಿಗಳು ಆರೋಗ್ಯಕರವಾಗಿ ಮತ್ತು ಉತ್ಸಾಹದಿಂದ ಕೆಲಸ ನಿರ್ವಹಿಸಲು ಅನುಕೂಲವಾಗುವಂತೆ ಜಿಲ್ಲಾಡಳಿತದ ಮೂಲಕ ಎಲ್ಲಾ ಅಗತ್ಯ ಮುನ್ನೆಚ್ಚರಿಕೆಗಳನ್ನು ಕೈಗೊಂಡಿದ್ದು, ಸಿಬ್ಬಂದಿಗಳ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಉಷ್ಣಾಂಶ ಹೆಚ್ಚಿರುವ ಕಾರಣ ಕರ್ತವ್ಯ ನಿರತ ಸಿಬ್ಬಂದಿಗಳ ದೇಹದಲ್ಲಿ ನಿರ್ಜಲೀಕರಣ ಉಂಟಾಗದAತೆ ಓ.ಆರ್.ಎಸ್. ಪಾಕೆಟ್ ಗಳನ್ನು ವಿತರಿಸಲಾಗುತ್ತಿದ್ದು, ಇದನ್ನು ನೀರಿನಲ್ಲಿ ಮಿಶ್ರಣ ಮಾಡಿ ಕುಡಿಯುವುದರಿಂದ ಆರೋಗ್ಯದಲ್ಲಿ ಹೆಚ್ಚಿನ ಚೇತರಿಕೆ ಸಾಧ್ಯವಾಗಲಿದೆ.
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

ತಲೆನೋವು, ಹೊಟ್ಟೆನೋವು, ವಾಂತಿ, ಆಸಿಡಿಟಿ ಮುಂತಾದ ಸಮಸ್ಯೆಗಳಿಗೆ ಒಳಗಾದಲ್ಲಿ ಅವುಗಳ ಪರಿಹಾರಕ್ಕಾಗಿ ಅಗತ್ಯವಿರುವ ಮಾತ್ರೆಗಳು, ಸ್ಯಾನಿಟೈಸರ್, ಸಣ್ಣ ಪುಟ್ಟ ಗಾಯಗಳಾದಲ್ಲಿ ಬ್ಯಾಂಡ್ ಏಡ್ ನ್ನು ಒಳಗೊಂಡ ಕಿಟ್ ನ್ನು ಸಿದ್ದಪಡಿಸಿದ್ದು, ಮಸ್ಟರಿಂಗ್ ದಿನದಂದು ಚುನಾವಣಾ ಸಾಮಗ್ರಿಗಳ ಜೊತೆಗೆ ಇದನ್ನು ವಿತರಿಸಲು ಸಿದ್ದತೆ ಮಾಡಿಕೊಳ್ಳಲಾಗಿದೆ.

ಚುನಾವಣಾ ಸಿಬ್ಬಂದಿಗೆ ನೀಡಲಾಗುವ ಆರೋಗ್ಯ ಕಿಟ್ ನಲ್ಲಿರುವ ಮಾತ್ರೆಗಳು ಹೆಸರು ಮತ್ತು ಅದನ್ನು ಯಾವ ಆರೋಗ್ಯ ಸಂಬAಧಿತ ಸಮಸ್ಯೆಗೆ ಬಳಸಬೇಕು ಎನ್ನುವ ಬಗ್ಗೆ ಸಹ ಕನ್ನಡದಲ್ಲಿಯೇ ವಿವರಗಳನ್ನು ನೀಡಿದ್ದು, ಮತಗಟ್ಟೆಯಲ್ಲಿರುವ ಯಾವುದೇ ಸಿಬ್ಬಂದಿ ಸುಲಭವಾಗಿ ಮಾತ್ರೆಗಳನ್ನು ಗುರುತಿಸಲು ಅನುಕೂಲವಾಗಂತೆ ವ್ಯವಸ್ಥೆ ಮಾಡಲಾಗಿದೆ.

ಅಲ್ಲದೇ ಮತದಾನದ ದಿನದಂದು ಯಾವುದೇ ಚುನಾವಣಾ ಕರ್ತವ್ಯ ನಿರತ ಸಿಬ್ಬಂದಿಗೆ ಆರೋಗ್ಯ ಸಮಸ್ಯೆ ಕಂಡು ಬಂದಲ್ಲಿ ತಕ್ಷಣವೇ ಸೂಕ್ತ ಚಿಕಿತ್ಸೆ ನೀಡಲು ಅನುಕೂಲವಾಗುವಂತೆ ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಮತ್ತು ಶುಶ್ರೂಷಕ ಸಿಬ್ಬಂದಿಗಳು ಸದಾ ಲಭ್ಯವಿರುವಂತೆ ಸೂಚನೆ ನೀಡಲಾಗಿದ್ದು, ಅಗತ್ಯ ಬಿದ್ದಲ್ಲಿ ತುರ್ತು ಚಿಕಿತ್ಸೆಗೆ ಬೇರೆ ಆಸ್ಪತ್ರೆಗೆ ಕರೆದೊಯ್ಯಲು ಅನುಕೂಲವಾಗುವಂತೆ ಆಂಬುಲೆನ್ಸ್ ಗಳನ್ನು ಸಿದ್ದತೆಯಲ್ಲಿಟ್ಟುಕೊಳ್ಳುವಂತೆ ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ.

ಈಗಾಗಲೇ ಮತಗಟ್ಟೆ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗೆ ನೀಡಲಾಗುತ್ತಿರುವ ದೈನಂದಿನ ಬಳಕೆಯ ವಸ್ತುಗಳ ಕುರಿತ ಕಿಟ್‌ನೊಂದಿಗೆ ಈ ಆರೋಗ್ಯ ಕಿಟ್‌ನ್ನು ನೀಡಲಾಗುತ್ತಿದೆ. ಜೊತೆಗೆ ಸಿಬ್ಬಂದಿಗಳಿಗೆ ಮತಗಟ್ಟೆಯಲ್ಲಿ ಯಾವುದೇ ಮೂಲಭೂತ ಸೌಕರ್ಯಗಳ ಕೊರತೆಯಾಗದಂತೆ ಕುಡಿಯುವ ನೀರು, ಊಟ ಮತ್ತು ಉಪಹಾರ ಸೇರಿದಂತೆ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ.


Share: