ಬೆಂಗಳೂರು, ಏಪ್ರಿಲ್ ೨೦ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ಸರ್ಕಾರದ ಸಹಯೋಗದಲ್ಲಿ ರಾಜ್ಯದ ಉದಯೋನ್ಮುಖ ಕನ್ನಡ ವಿಜ್ಞಾನ ಬರಹಗಾರರಿಗೆ, ಕಾರ್ಯನಿರತ ವಿಜ್ಞಾನ ಪತ್ರಿಕೋದ್ಯಮಿಗಳು/ವರದಿಗಾರರಿಗೆ ಜನಪ್ರಿಯ ವಿಜ್ಞಾನ ಬರವಣಿಗೆಯ ತರಬೇತಿ ಶಿಬಿರವನ್ನು ಹಮ್ಮಿಕೊಂಡಿದೆ. ವಿಜ್ಞಾನ ಬರವಣಿಗೆಯಲ್ಲಿ ಆಸಕ್ತಿ ಇರುವ ಗ್ರಾಮೀಣ ವಿಭಾಗದ ವಿಜ್ಞಾನ ಶಿಕ್ಷಕರು, ಯುವ ಪತ್ರಿಕಾ ವರದಿಗಾರರು, ಚಿತ್ರ ನಿರೂಪಕರು, ರೇಡಿಯೋ ಭಾಷಣಕಾರರು ಮತ್ತಿತರ ಆಸಕ್ತರು ಶಿಬಿರದಲ್ಲಿ ಭಾಗವಹಿಸಬಹುದು.
ಈ ಶಿಬಿರವು ದಿನಾಂಕ ೨೬-೫-೨೦೧೦ ರಿಂದ ೩೦-೫-೨೦೧೦ ವರೆಗೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಕಣಿವೆ ಗ್ರಾಮದ ರಾಮಲಿಂಗೇಶ್ವರ ದೇವಾಲಯದ ಸಭಾಂಗಣದಲ್ಲಿ ಜರುಗುವುದು. ನುರಿತ ವಿಜ್ಞಾನ ಬರಹಗಾರರಿಂದ, ಸಂಪಾದಕರಿಂದ, ಸಂವಹನಕಾರರಿಂದ ಶಿಬಿರಾರ್ಥಿಗಳಿಗೆ ವಿಜ್ಞಾನ ಬರವಣಿಗೆಯ ಕುರಿತ ವಿವಿಧ ಕೌಶಲ್ಯ, ಆಕರಗಳು, ಶಬ್ಧ-ಬಳಕೆ, ಅನುವಾದ, ವಿಜ್ಞಾನ ಪತ್ರಿಕೋದ್ಯಮ-ಸಂವಹನ ವಿಧಾನಗಳು ಮುಂತಾದ ಕ್ಷೇತ್ರಗಳಲ್ಲಿ ತರಬೇತಿ ನೀಡಲಾಗುವುದು.
ಶಿಬಿರಾರ್ಥಿಗಳಾಗಿ ಭಾಗವಹಿಸಲಿಚ್ಫಿಸುವವರು ವಿಜ್ಞಾನ ಸಂವಹನದಲ್ಲಿ ವಿಶೇಷ ಆಸಕ್ತಿ ಹೊಂದಿರಬೇಕು. ಶಿಬಿರದಲ್ಲಿ ಭಾಗವಹಿಸಲು ವ್ಯಕ್ತಿಗತ ವಿವರಗಳು (ಬಯೋಡಾಟಾ) ಪಾಸ್‌ಪೋರ್ಟ ಅಳತೆಯ ಭಾವಚಿತ್ರ ಹಾಗೂ ಒಂದು ಸ್ವರಚಿತ ಲೇಖನವನ್ನು ಅರ್ಜಿಯ ಜೊತೆಯಲ್ಲಿ ಗೌರವ ಕಾರ್ಯದರ್ಶಿ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ವಿಜ್ಞಾನ ಭವನ, ನಂ. ೨೪/೨, ೨೧ ನೇ ಮುಖ್ಯರಸ್ತೆ, ಬನಶಂಕರಿ ೨ನೇ ಹಂತ, ಬೆಂಗಳೂರು - ೫೬೦ ೦೭೦ ಈ ವಿಳಾಸಕ್ಕೆ ದಿನಾಂಕ ೦೫-೦೫-೨೦೧೦ ರೊಳಗಾಗಿ ತಲುಪುವಂತೆ ಸಲ್ಲಿಸಬೇಕು. ಕರಾವಿಪ ಈ ಹಿಂದೆ ಸಂಘಟಿಸಿದ್ದ ಲೇಖಕರ ಶಿಬಿರಗಳಲ್ಲಿ ಈಗಾಗಲೇ ಭಾಗವಹಿಸಿದವರು ಅರ್ಜಿ ಸಲ್ಲಿಸುವಂತಿಲ್ಲ.
ಆಯ್ಕೆಯಾದ ಅಭ್ಯರ್ಥಿಗಳಿಗೆ ವಿಜ್ಞಾನ ಪರಿಷತ್ತಿನಿಂದ ಉಚಿತ ಊಟ, ವಾಸ್ತವ್ಯದ ವ್ಯವಸ್ಥೆ ಮಾಡಲಾಗುವುದು ಮತ್ತು ಎರಡನೇ ದರ್ಜೆ ರೈಲು/ಬಸ್ ಪ್ರಯಾಣ ಭತ್ಯೆ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ ವಿಜ್ಞಾ ಪರಿಷತ್ತಿನ ಕಚೇರಿ : (೦೮೦-೨೬೭೧೮೯೩೯/೨೬೭೧೮೯೫೯ (ಕರಾವಿಪ ಇ-ಮೇಲ್ ಞಡಿvಠಿ.iಟಿಜಿo@gmಚಿiಟ.ಛಿom) ಅಥವಾ ಪ್ರೀ ಸಿ.ಡಿ. ಪಾಟೀಲ, ಗೌರವ ಕಾರ್ಯದರ್ಶಿ (೯೪೪೮೪೨೭೫೮೫)/ಪ್ರೊ: ಕೆ.ಎಸ್. ನಟರಾಜ್, ಗೌರವ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ: (೯೪೪೯೬೫೫೨೯೭) ಶ್ರೀ ಎಂ.ಜಿ. ಪ್ರಭುದೇವ, ಅಧ್ಯಕ್ಷರು, ಜಿಲ್ಲಾ ಸಮಿತಿ, ಕೊಡಗು ಜಿಲ್ಲೆ (೯೪೪೮೩೨೫೮೪೬) ಇವರುಗಳನ್ನು ಸಂಪರ್ಕಿಸಬಹುದು.