ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಕಾರವಾರ: ಸಿಬ್ಬಂದಿಗಳಿಗೆ ದೀಪಾವಳಿ ಉಡುಗೊರೆ ವಿತರಿಸಿದ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

ಕಾರವಾರ: ಸಿಬ್ಬಂದಿಗಳಿಗೆ ದೀಪಾವಳಿ ಉಡುಗೊರೆ ವಿತರಿಸಿದ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

Thu, 09 Nov 2023 06:04:07  Office Staff   S O News

ಕಾರವಾರ:  ದೀಪಾವಳಿ ಹಬ್ಬದ ಪ್ರಯುಕ್ತ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾರ್ಯ ನಿರ್ವಹಿಸುವ ಎಲ್ಲಾ ಡಿ ದರ್ಜೆ ನೌಕರರು ಮತ್ತು ವಾಹನ ಚಾಲಕರಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ , ದೀಪಾವಳಿ ಹಬ್ಬದ ಪ್ರಯುಕ್ತ ಹೊಸ ಬಟ್ಟೆಯ ಉಡುಗೊರೆಗಳನ್ನು ನೀಡಿ, ಹಬ್ಬದ ಶುಭಾಷಯಗಳನ್ನು ತಿಳಿಸಿದರು.

ಇಂದು ಜಿಲ್ಲಾಧಿಕಾರಿ ಕಚೇರಿಯ ತಮ್ಮ ಕೊಠಡಿಯಲ್ಲಿ 35 ಕ್ಕೂ ಅಧಿಕ ಸಿಬ್ಬಂದಿಗಳಿಗೆ ಉಡುಗೊರೆಗಳನ್ನು ನೀಡಿ, ಶುಭ ಹಾರೈಸಿದರು. ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಾಜಪೂತ್ ಉಪಸ್ಥಿತರಿದ್ದರು.


Share: