ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಕಾರವಾರ: ಸ್ಪಧ್ಮಾತ್ಮಕ ಪರೀಕ್ಷೆಗೆ ಹಾಜರಾಗಲು ಹೆಚ್ಚುವರಿ ಬಸ್ ಸೌಲಭ್ಯ

ಕಾರವಾರ: ಸ್ಪಧ್ಮಾತ್ಮಕ ಪರೀಕ್ಷೆಗೆ ಹಾಜರಾಗಲು ಹೆಚ್ಚುವರಿ ಬಸ್ ಸೌಲಭ್ಯ

Sun, 29 Oct 2023 00:09:59  Office Staff   S O News

ಕಾರವಾರ:- ಜಿಲ್ಲೆಯಲ್ಲಿ ಅಕ್ಟೋಬರ್ 29 ರಂದು ಬೆಳಗ್ಗೆ 10.30  ರಿಂದ 12.30 ರ ವರೆಗೆ ಮತ್ತು ಮಧ್ಯಾಹ್ನ 2.30 ರಿಂದ 4.30 ರ ವರೆಗೆ  24 ಪರೀಕ್ಷಾ ಕೇಂದ್ರಗಳಲ್ಲಿ ನಡೆಯುವ ವಿವಿಧ ನಿಗಮ ಮಂಡಳಿಗಳ ನೇಮಕಾತಿ ಪರೀಕ್ಷೆ ಕುರಿತಂತೆ, ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಒಂದು ಗಂಟೆ ಮುಂಚಿತವಾಗಿ ಹಾಜರಾಗಬೇಕಿರುವುದರಿಂದ , ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಿಂದ ಪರೀಕ್ಷಾ ಕೇಂದ್ರದ ಪ್ರದೇಶಗಳಿಗೆ ತೆರಳಲು ಮತ್ತು ವಾಪಸ್ ಬರಲು ಅನುಕೂಲವಾಗುವಂತೆ ಹೆಚ್ಚುವರಿ ಬಸ್ ಸೌಲಭ್ಯವನ್ನು ಒದಗಿಸುವಂತೆ ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚಿಸಿದ್ದಾರೆ.

 ಜಿಲ್ಲೆಯ ಪರೀಕ್ಷಾ ಕೇಂದ್ರಗಳಿಗೆ ವಿವಿಧ ಜಿಲ್ಲೆಗಳಿಂದ ಒಟ್ಟು 6,956 ಅಭ್ಯರ್ಥಿಗಳು ಪರೀಕ್ಷೆಗಳು ಹಾಜರಾಗಲಿದ್ದು, ಬಸ್ ಅನಾನುಕೂಲತೆಯಿಂದ ಯಾವುದೇ ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳು ಪರೀಕ್ಷೆಯಿಂದ ವಂಚಿತರಾಗದಂತೆ , ನಿಗದಿತ ಸಮಯಕ್ಕೆ  ಸರಿಯಾಗಿ , ಸುವ್ಯವಸ್ಥಿತ ರೀತಿಯಲ್ಲಿ  ಬಸ್ ಸಂಚಾರ ವ್ಯವಸ್ಥೆಯನ್ನು ಕಲ್ಪಿಸುವಂತೆ ಸೂಚನೆ ನೀಡಿದ್ದಾರೆ.

ಸ್ಪಧ್ಮಾತ್ಮಕ ಪರೀಕ್ಷೆ : ನಿಷೇದಾಜ್ಞೆ

ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ದಿ ನಿಗಮ ನಿಯಮಿತ ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ,  ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಮತ್ತು ಮೈಸೂರು ಸೇಲ್ಸ್ ಇಂಟರ್‍ನ್ಯಾಶನಲ್ ಲಿಮಿಟೆಡ್ ಸಂಸ್ಥಗಳಲ್ಲಿ ಖಾಲಿ ಇರುವ ಹುದ್ದೆಗಳ (ದ್ವಿತೀಯ ದರ್ಜೆ ಸಹಾಯಕ, ಕಿರಿಯ ಸಹಾಯಕರು ಮುಂತಾದ ಸಮನಾದ ಹುದ್ದೆಗಳಿಗೆ) ನೇಮಕಾತಿ ನಡೆಯಲಿರುವ ಸ್ಫರ್ದಾತ್ಮಕ ಪರೀಕ್ಷೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ ಯಾವುದೇ ತರಹದ ಅವ್ಯವಹಾರ ಕಾನೂನು ಬಾಹಿರ ಚಟುವಟಿಕೆಗಳು ಅಥವಾ ಶಾಂತಿಭಂಗ ಆಗದಂತೆ ಪರೀಕ್ಷಾ ಕೇಂದ್ರದ ಸುತ್ತಮುತ್ತಲಲ್ಲಿ ಸಭೆ ಸಮಾರಂಭಗಳನ್ನು ನಡೆಯುತ್ತಿದ್ದಲ್ಲಿ ಧ್ವನಿವರ್ಧಕಗಳನ್ನು ತಡೆಯುವ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಅ.29 ರಂದು ಪರೀಕ್ಷೆ ಪ್ರಾರಂಭವಾಗುವ ಸಮಯದಿಂದ ಪರೀಕ್ಷಾ ಅವಧಿ ಮುಕ್ತಾಯವಾಗುವವರಗೆ ಸದರಿ ವ್ಯಾಪ್ತಿಯಲ್ಲಿ ಸಿ.ಆರ್.ಪಿ.ಸಿ. ಕಾಯ್ದೆಯ ಕಲಂ 144 ರಂತೆ ಜಿಲ್ಲಾಧಿಕಾರಿಗಳು ನಿಷೇದಾಜ್ಞೆ ಹೊರಡಿಸಿದ್ದಾರೆ.

 ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿರುವ ಝೆರಾಕ್ಸ್ ಅಂಗಡಿ ಹಾಗೂ ಸೈಬರ್ ಕೆಫೆಯನ್ನು ಪರೀಕ್ಷಾವಧಿಯಲ್ಲಿ ಮುಚ್ಚುವಂತೆ ನೋಡಿಕೊಳ್ಳತಕ್ಕದ್ದು, ಪರೀಕ್ಷಾ ಕೇಂದ್ರದ ಆವರಣದಲ್ಲಿ ಅಭ್ಯರ್ಥಿಗಳು ಇಲೆಕ್ಟ್ರಾನಿಕ್ಸ್ ವಸ್ತುಗಳು ಅಂದರೆ, ಮೊಬ್ಯಲ್ ಪೋನ್‍ಗಳು, Smart watch, Wireless/Bluetooth, Ear head phone ಗಳನ್ನು ಬಳಸುವುದು ಹಾಗೂ ಹೊಂದುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಆದೇಶಿಸಿದ್ದಾರೆ.


Share: