ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಓರ್ವ ಮಹಿಳೆ ಮೃತ್ಯು, ಇಬ್ಬರ ಸ್ಥಿತಿ ಗಂಭೀರ!

ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಓರ್ವ ಮಹಿಳೆ ಮೃತ್ಯು, ಇಬ್ಬರ ಸ್ಥಿತಿ ಗಂಭೀರ!

Tue, 09 Apr 2024 23:36:15  Office Staff   SO News Service

ಕುಂದಾಪುರ: ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮಹಿಳೆ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಕುಂದಾಪುರದ ಕೆಎಸ್‌ಆರ್‌ಟಿಸಿ ಡಿಪೋ ಎದುರುಗಡೆ ನಡೆದಿದೆ.

ಮುಂಬೈ ನಿಂದ ಕಣ್ಣೂರ್ (ಕೇರಳ) ಹಿಂತಿರುಗುತ್ತಿದ್ದ ಮೂವರು ಪ್ರಯಾಣಿಸುತ್ತಿದ್ದ ಟೊಯೋಟೊ ಇನ್ನೋವಾ ಕಾರು ಅಪಘಾತಗೀಡಾಗಿದೆ.

ಕುಂದಾಪುರ ಉಡುಪಿ ನಡುವಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕುಂದಾಪುರ ಸಮೀಪದ ಕೆ ಎಸ್ ಆರ್ ಟಿ ಸಿ ಡಿಪೋ ಎದುರುಗಡೆ ಫೈ ಓವರ್ ಮೇಲೆ ಚಲಿಸುತ್ತಿದ್ದ ಕಾರು ಏಕಾಏಕಿ ಸರ್ವಿಸ್ ರಸ್ತೆ ಮತ್ತು ಹೆದ್ದಾರಿ ನಡುವಿನ ಡಿವೈಡೆರ್ ಗೆ ಡಿಕ್ಕಿ ಹೊಡೆದಿದೆ.

ಅಪಘಾತದ ತೀವ್ರತೆಗೆ ಡಿಕ್ಕಿ ಹೊಡೆದ ಫಾರ್ಚುನರ್ ಇನ್ನೋವಾ ಕಾರು ಕಬ್ಬಿಣದ ಗ್ರಿಲ್ ಗಳನ್ನು ಮುರಿದು ಸರ್ವಿಸ್ ರಸ್ತೆ ಮೇಲೆ ತಲೆಕೆಳಗಾಗಿ ಬಿದ್ದಿದೆ ಸಂಪೂರ್ಣ ನುಚ್ಚು ನೂರಾಗಿರುವ ಇನ್ನೋವಾ ಕಾರಿನಲ್ಲಿದ್ದ ಮೂವರ ಪೈಕಿ ಓರ್ವ ಮಹಿಳೆ ಮೃತಪಟ್ಟಿರುತ್ತಾರೆ.

ಉಳಿದ ಇಬ್ಬರು ಗಂಭೀರ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.
ಅಪಘಾತದ ಸಂದರ್ಭ ಸರ್ವಿಸ್ ರಸ್ತೆಯಲ್ಲಿ ಯಾವುದೇ ವಾಹನ ಸಂಚಾರ ಇಲ್ಲದ ಕಾರಣ ಹೆಚ್ಚಿನ ಅನಾಹುತ ತಪ್ಪಿದೆ.

ಘಟನಾ ಸ್ಥಳಕ್ಕೆ ಕುಂದಾಪುರ ಸಂಚಾರಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಕೊಂಡಿದ್ದಾರೆ ಸರ್ವಿಸ್ ರಸ್ತೆಯಲ್ಲಿ ಮಗುಚಿ ಬಿದ್ದ ಕಾರಿನಿಂದಾಗಿ ಸಂಚಾರ ಸಮಸ್ಯೆ ಉಂಟಾಗಿದ್ದು ಸ್ಥಳೀಯ ಸಾರ್ವಜನಿಕರು ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಿಕೊಟ್ಟರು.

 


Share: