ಬೆಂಗಳೂರು, ನ.೮: ವಿದ್ಯಾರ್ಥಿಗಳು ಉನ್ನತ ಸ್ಥಾನ ಅಲಂಕರಿಸುವುದರ ಜೊತೆಗೆ ಮಾನಯ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ಕರೆನೀಡಿದ್ದಾರೆ.
ನಗರದ ಬನಶಂಕರಿ ೩ನೆ ಹಂತದಲ್ಲಿರುವ ಪಿಇಎಸ್ ತಾಂತ್ರಿಕ ಸಂಸ್ಥೆಯಲ್ಲಿ ರವಿವಾರ ಏರ್ಪಡಿಸಿದ್ದ ೨೩ನೆ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಎಂಜಿನಿಯರಿಂಗ್ ಶಿಕ್ಷಣಕ್ಕೆ ವಿದ್ಯಾರ್ಥಿ ವೇತನ ವಿತರಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಕಠಿಣ ಪರಿಶ್ರಮ, ಮಾನಯತೆ ಹಾಗೂ ಪ್ರಾಮಾಣಿಕತೆಯನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಈ ಮೂರು ಗುಣಗಳನ್ನು ವಿದ್ಯಾರ್ಥಿಗಳು ಬೆಳೆಸಿಕೊಂಡಾಗ ಮಾತ್ರ ವಿದ್ಯಾರ್ಥಿ ಜೀವನದಲ್ಲಿ ಎದುರಾಗುವ ಮಾರ್ಗದರ್ಶನದ ಕೊರತೆ, ಬಡತನ, ಆರ್ಥಿಕ ಅಸಮಾನತೆ ಮುಂತಾದ ಸಮಸ್ಯೆಗಳು ಗೌಣವಾಗುತ್ತವೆ ಎಂದು ಶಿವರಾಜ್ ಪಾಟೀಲ್ ಕಿವಿಮಾತು ಹೇಳಿದರು.
ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನವನ್ನು ಸದುಪಯೋಗಪಡಿಸಿಕೊಳ್ಳಬೇಕು. ಜೀವನದಲ್ಲಿ ಉನ್ನತ ಸ್ಥಾನಕ್ಕೆ ಏರಿದ ನಂತರ ಶಿಕ್ಷಣ ಪಡೆದ ಶಾಲೆ ಹಾಗೂ ಪೋಷಕರನ್ನು ಮರೆಯಬಾರದು. ಜೊತೆಗೆ ಸಾಮಾಜಿಕ ಕಾಳಜಿ ಮತ್ತು ಬದ್ಧತೆಯನ್ನು ಮೈಗೂಡಿಸಿಕೊಳ್ಳಬೇಕು ಎಂದು ಶಿವರಾಜ್ ಪಾಟೀಲ್ ಕರೆ ನೀಡಿದರು.
ಮಕ್ಕಳಿಗಾಗಿ ಆಸ್ತಿ ಮಾಡಬೇಡಿ: ಕೆಲ ಪೋಷಕರು ತಮ್ಮ ಮಕ್ಕಳಿಗಾಗಿ ಅನೇಕ ಭ್ರಷ್ಟಾಚಾರದಲ್ಲಿ ತೊಡಗಿ, ಅಕ್ರಮವಾಗಿ ಆಸ್ತಿಯನ್ನು ಗಳಿಸಲು ಮುಂದಾಗುತ್ತಾರೆ. ಇದನ್ನು ಬಿಟ್ಟು ಮಕ್ಕಳಿಗಾಗಿ ಆಸ್ತಿ ಮಾಡುವ ಬದಲು, ಮಕ್ಕಳನ್ನೆ ಆಸ್ತಿಯಾಗಿ ಕಾಣುವ ಮನೋಭಾವವನ್ನು ಪೋಷಕರು ಬೆಳೆಸಿಕೊಳ್ಳಬೇಕು ಎಂದು ಶಿವರಾಜ್ ಪಾಟೀಲ್ ಸಲಹೆ ಮಾಡಿದರು.
ಅಪರಾಧ, ಜಾತಿ, ಭ್ರಷ್ಟಾಚಾರ ದೇಶಕ್ಕೆ ಕಾನ್ಸರ್ ಆಗಿ ಪರಿಣಮಿಸಿದೆ. ಇದಕ್ಕೆ ಎಷ್ಟೇ ಚಿಕಿತ್ಸೆ ನೀಡಿದರೂ, ಹೊರಬರಲು ಸಾಧ್ಯವಾಗುತ್ತಿಲ್ಲ ಎಂದು ಶಿವರಾಜ್ ಪಾಟೀಲ್ ವಿಷಾದ ವ್ಯಕ್ತಪಡಿಸಿದರು.
ಸಮಾರಂಭದಲ್ಲಿ ಪಿಇಎಸ್ ಶಿಕ್ಷಣ ಸಂಸೆ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಪ್ರೊ.ಎಂ.ಆರ್.ದೊರೆಸ್ವಾಮಿ, ಪಿಇಎಸ್ ಶಿಕ್ಷಣ ಸಂಸ್ಥೆಯ ಸಿಇಓ ಪ್ರೊ.ಟಿ.ಜವಹರ್, ಪ್ರೊ.ಅಜಯ್‌ಕುಮಾರ್, ಪ್ರಾಂಶುಪಾಲ ಡಾ.ಜೆ.ಸೂರ್ಯಪ್ರಸಾದ್ ಮುಂತಾದವರು ಉಪಸ್ಥಿತರಿದ್ದರು.