ಮಂಗಳೂರು:೧೮:-ದಕ ಜಿಲ್ಲೆಯ ೪೫ ಪರೀಕ್ಷಾ ಕೇಂದ್ರಗಳಲ್ಲಿ ಪಿಯುಸಿ ಪರೀಕ್ಷೆ ಸುಸೂತ್ರವಾಗಿ ನಡೆದಿದ್ದು, ಡಿಬಾರ್ ಪ್ರಕರಣಗಳಾಗಿಲ್ಲ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಇಂದು ರಸಾಯನಶಾಸ್ತ್ರ ಮತ್ತು ಲೆಕ್ಕಶಾಸ್ತ್ರ ಪರೀಕ್ಷೆಗಳು ನಡೆದಿದ್ದು, ರಸಾಯನ ಶಾಸ್ತ್ರ ಪರೀಕ್ಷೆಗೆ ಒಟ್ಟು ೭,೯೭೫ ವಿದ್ಯಾರ್ಥಿಗಳು ಹಾಜರಾಗಬೇಕಿದ್ದು, ೧೦೧ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು. ೭,೮೭೪ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಲೆಕ್ಕಶಾಸ್ತ್ರಕ್ಕೆ (ಅಕೌಂಟ್ಸ್) ೧೧,೦೧೧ ಮಕ್ಕಳಲ್ಲಿ ೨೬೩ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದು, ೧೦,೭೪೮ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ ಎಂದು ತಿಳಿಸಿದ್ದಾರೆ.