ಬೆಂಗಳೂರು, ಏಪ್ರಿಲ್ ೨೬(ಕರ್ನಾಟಕ ವಾರ್ತೆ): ಅವರು ಏಪ್ರಿಲ್ 27 ರಂದು ಬೆಳಿಗ್ಗೆ ೧೧ ಗಂಟೆಗೆ ರಾಜ್ಯದ ಪರಿಶಿಷ್ಠ ಜಾತಿಗೆ ಸೇರಿದ ಲೋಕಸಭಾ ಸದಸ್ಯರು, ರಾಜ್ಯ ಸಭಾ ಸದಸ್ಯರು, ವಿಧಾನ ಸಭಾ ಮತ್ತು ವಿಧಾನ ಪರಿಷತ್ ಸದಸ್ಯರುಗಳು, ಮಾಜಿ ವಿಧಾನ ಸಭಾ ಮತ್ತು ವಿಧಾನ ಪರಿಷತ್ ಸದಸ್ಯರುಗಳು, ಹಾಗೂ ರಾಜ್ಯದ ಪ.ಜಾತಿ ಸಂಘದ ಪದಾಧಿಕಾರಿಗಳೊಂದಿಗೆ ವಿಧಾನ ಸೌಧದ ಸಮೇಳನ ಸಭಾಂಗಣದಲ್ಲಿ ಸಭೆ ನಡೆಸಲಿದ್ದಾರೆ.
ಅದೇ ದಿನ ಮಧ್ಯಾಹ್ನ ೩ ಗಂಟೆಗೆ ರಾಜ್ಯದ ಸಮಾಜ ಕಲ್ಯಾಣ ಸಚಿವರಾದ ಶ್ರೀ ಡಿ. ಸುಧಾಕರ್ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಪ.ಜಾತಿ ಜನರ ಸಾಮಾಜಿಕ ಆರ್ಥಿಕ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿಧಾನ ಸೌಧ ಸಮೇಳನ ಸಭಾಂಗಣದಲ್ಲಿಯೇ ಸಭೆ ನಡೆಸಲಿದ್ದಾರೆ.
ಏಪ್ರಿಲ್ ೨೮ ರಂದು ಬೆಳಿಗ್ಗೆ ೧೧.೦೦ ಗಂಟೆಗೆ ಪರಿಶಿಷ್ಟ ಜಾತಿ ಜನರ ಮೇಲಿನ ದೌರ್ಜನ್ಯ ಮತ್ತು ಅವರ ಸೇವಾ ಸುರಕ್ಷತೆ ಬಗ್ಗೆ ರಾಜ್ಯದ ಸಮಾಜ ಕಲ್ಯಾಣ ಸಚಿವರು, ಮುಖ್ಯ ಕಾರ್ಯದರ್ಶಿ ಹಾಗೂ ಡೈರೆಕ್ಟರ್ ಜನರಲ್ ಆಫ್ ಪೊಲೀಸ್ ಅವರೊಂದಿಗೆ ಸಭೆ ನಡೆಸಲಿದ್ದಾರೆಂದು ಸಮಾಜ ಕಲ್ಯಾಣ ಇಲಾಖೆ ಪ್ರಕಟಣೆ ತಿಳಿಸಿದೆ.