ಮೈಸೂರು, ಏ. ೨೦,ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಅಡಿಯಲ್ಲಿ ರಾಜ್ಯದ ನಾಲ್ಕು ಕಂದಾಯ ವಿಭಾಗಗಳಾದ ಬೆಂಗಳೂರು, ಮೈಸೂರು ವಿಭಾಗದ ಮಂಗಳೂರಿನಲ್ಲಿ ಬೆಳಗಾವಿ ವಿಭಾಗ ಮತ್ತು ಗುಲ್ಬರ್ಗಾ ವಿಭಾಗಗಳಲ್ಲಿ ನಾಲ್ಕು ತಿಂಗಳ ಅವಧಿಯ ಗ್ರಂಥಾಲಯ ವಿಜ್ಞಾನ ತರಬೇತಿ ಶಾಲೆಯನ್ನು ನಡೆಸಲಾಗುತ್ತಿದೆ. ಅದಕ್ಕೆ ಸಂಬಂಧಪಟ್ಟಂತೆ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕನಿಷ್ಠ ಶೇಕಡ ೪೦ರಷ್ಟು ಅಂಕಗಳನ್ನು ಪಡೆದು ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹಾಲಿ ಕಾರ್ಯನಿರ್ವಹಿಸುತ್ತಿರುವ ಅಭ್ಯರ್ಥಿಗಳು ಸಂಬಂಧಪಟ್ಟ ಸಂಸ್ಥೆ ಇಲಾಖೆ ಮೇಲಾಧಿಕಾರಿಗಳ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಗ್ರಾಮ ಪಂಚಾಯಿತಿ ಮೇಲ್ವಿಚಾರಕರು ಸಂಬಂಧಪಟ್ಟ ಮುಖ್ಯ ಗ್ರಂಥಾಲಯಾಧಿಕಾರಿಗಳ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿಯ ಜೊತೆಗೆ ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ಸೇವೆಗೆ ಸೇರಿದ ದಿನಾಂಕ, ವೇತನ ಪ್ರಮಾಣ ಪತ್ರ, ನಡವಳಿಕೆ ಪ್ರಮಾಣ ಪತ್ರಗಳ ನಕಲು ಪ್ರತಿಗಳನ್ನು ಲಗತ್ತಿಸಿರಬೇಕು. ಆಯಾಯ ವಿಭಾಗದ ಅಭ್ಯರ್ಥಿಗಳು ಕಡ್ಡಾಯವಾಗಿ ಸಂಬಂಧಪಟ್ಟ ವಿಭಾಗದ ಕಚೇರಿಗಳಲ್ಲಿ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಅರ್ಜಿಗಳನ್ನು ಸಲ್ಲಿಸುವ ಕೊನೆಯ ದಿನಾಂಕ ೫.೫.೨೦೧೦.
ಹೆಚ್ಚಿನ ವಿವರಗಳಿಗಾಗಿ ಈ ಕೆಳಗಿನ ವಿಳಾಸಗಳಲ್ಲಿ ಸಂಪರ್ಕಿಸಬಹುದು. ನಿದೇರ್ಶಕರ ಕಚೇರಿ, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, ೪ನೇ ಮಹಡಿ, ಡಾ: ಅಂಬೇಡ್ಕರ್ ವೀದಿ, ಬೆಂಗಳೂರು - ೫೬೦ ೦೦೧, ಉಪನಿರ್ದೇಶಕರ ಕಚೇರಿ, ನಗರ ಕೇಂದ್ರ ಗ್ರಂಥಾಲಯ, ಡಿ.ಸಿ. ಆಫೀಸ್ ಕೌಪೌಂಡ್, ಧಾರವಾಡ, ಉಪನಿರ್ದೇಶಕರ ಕಚೇರಿ, ನಗರ ಕೇಂದ್ರ ಗ್ರಂಥಾಲಯ, ಬಾವುಟಗುಡ್ಡೆ, ಮಂಗಳೂರು, ಉಪನಿರ್ದೇಶಕರ ಕಚೇರಿ, ನಗರ ಕೇಂದ್ರ ಗ್ರಂಥಾಲಯ, ಎಂ.ವಿ.ಹೆಚ್.ಎಸ್. ಶಾಲೆ ಆವರಣ, ಸೂಪರ್ ಮಾರ್ಕೆಟ್, ಗುಲ್ಬರ್ಗಾ.
ಮೇಲ್ಕಂಡ ವಿಳಾಸಗಳಲ್ಲಿ ನಿಮಗೆ ಸಂಬಂಧಪಟ್ಟ ಆಯಾಯ ಕಂದಾಯ ವಿಭಾಗಗಳಿಂದ ಅರ್ಜಿಗಳನ್ನು ಪಡೆದು ಸಲ್ಲಿಸಬೇಕು.