ಉಜಿರೆ, ಡಿಸೆಂಬರ್ ೨: ವಿಶ್ವ ತುಳು ಸಮ್ಮೇಳನ ಕಛೇರಿಗೆ ಜಿಲ್ಲಾ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಶ್ರೀ ಬೊಂಡಾಲ ಜಗನ್ನಾಥ ಶೆಟ್ಟಿ ಭೇಟಿ ನೀಡಿದರು.
ಸಮ್ಮೇಳನಾಧ್ಯಕ್ಷ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರೊಂದಿಗೆ ಮಾತನಾಡಿದ ಅವರು ವಿಶ್ವ ತುಳು ಸಮ್ಮೇಳನಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದರು. ಜಿಲ್ಲಾಧ್ಯಕ್ಷ ಅರುಣ್ ಕುವೆಲ್ಲೊ, ಕಾರ್‍ಯದರ್ಶಿ ಮಿಥುನ್ ರೈ, ಗ್ರಾಮೀಣ ಯುವ ಕಾಂಗ್ರೇಸ್ ಅಧ್ಯಕ್ಷ ಚಂದನ್ ಕಾಮತ್, ಧರ್ಮಸ್ಥಳ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.