ಬಂಟ್ವಾಳ, ಡಿಸೆಂಬರ್ 16: ಲಾರಿಗಳಲ್ಲಿ ಅಕ್ರಮವಾಗಿ ಮರಳು ಸಾಗಾಟ ನಡೆಸಲಾಗುತ್ತಿದೆ ಎಂದು ಆರೋಪಿಸಿ ಜಯ ಕರ್ನಾಟಕ ಸಂಘಟನೆಯ ಕಾರ್ಯಕರ್ತರು ೧೨ ಲಾರಿಗಳನ್ನು ತಡೆದು ಪೋಲಿಸರಿಗೊಪ್ಪಿಸಿದ ಘಟನೆ ಮಂಗಳವಾರ ರಾತ್ರಿ ಪಾಣೆ ಮಂಗಳೂರು ಟೋಲ್ ಗೇಟ್ ಬಳಿ ನಡೆದಿದೆ,
ಜಯ ಕರ್ನಾಟಕ ದ ಜಿಲ್ಲಾಧ್ಯಕ್ಷ ಶ್ರೀಕಾಂತ್ ಶೆಟ್ಟಿ ನೇತೃತ್ವದಲ್ಲಿ ಈ ಕಾರ್ಯಚರಣೆ ನಡೆದಿದೆ. ಅಡ್ಯಾರ್ ನೇತ್ರಾವತಿ ನದಿ ಕಿನಾರೆಯಿಂದ ಮರಳು ತುಂಬಿ ತರಲಾಗುತ್ತಿದ್ದು,ಅದನ್ನು ಕೇರಳಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದೆ ಎಂಬುದು ಸಂಘಟನೆಯ ಆರೋಪಿಸಿದ್ದರು. ಘಟನಾ ಸ್ಥಳಕ್ಕೆ ಆಗಮಿಸಿದ್ದ ನಗರ ಠಾಣಾಧಿಕಾರಿ ಮತ್ತು ಸಿಬ್ಬಂದಿಗಳು ಲಾರಿ ಚಾಲಕರಲ್ಲಿ ಮರಳು ಸಾಗಾಟಕ್ಕೆ ಸಂಬಂಧಿಸಿ ಸೂಕ್ತ ದಾಖಲೆಗಳಿರುವುದನ್ನು ಪರಿಶೀಲಿಸಿ ಬಿಡುಗಡೆ ಮಾಡಿದ್ದಾರೆ ಎನ್ನಲಾಗಿದೆ.