ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಡಿಪ್ಲೋಮಾ ಕೋರ್ಸ್ಗಳಿಗೆ ಅರ್ಜಿ ಆಹ್ವಾನ

ಡಿಪ್ಲೋಮಾ ಕೋರ್ಸ್ಗಳಿಗೆ ಅರ್ಜಿ ಆಹ್ವಾನ

Tue, 11 Jun 2024 02:16:33  Office Staff   SOnews

 

ಕಾರವಾರ:2024-25ನೇ ಸಾಲಿನಲ್ಲಿ 2 ವರ್ಷಗಳ ಐಟಿಐ / ದ್ವಿತೀಯ ಪಿಯುಸಿ(ವಿಜ್ಞಾನ)/ ದ್ವಿತೀಯ ಪಿಯುಸಿ(ತಾಂತ್ರಿಕ ವಿಷಯಗಳು) ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಂದ ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾಂತರ 2ನೇ ವರ್ಷ / 3ನೇ ಸೆಮಿಸ್ಟರ್ ಡಿಪ್ಲೋಮಾ ಕೋರ್ಸ್ಗಳಿಗೆ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ .

 ಅಭ್ಯರ್ಥಿಯು ಅರ್ಜಿಯನ್ನು ಸರ್ಕಾರಿ ಪಾಲಿಟೆಕ್ನಿಕ್, ಕಾರವಾರ ಸಂಸ್ಥೆಯಿA ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಜೂನ್ 25 ರೊಳಗೆ ಸಂಬAಧಿಸಿದ ಅಗತ್ಯ ಪ್ರಮಾಣ ಪತ್ರಗಳ ಝರಾಕ್ಸ್ ಪತ್ರಿಯೊಂದಿಗೆ ಸಲ್ಲಿಸಬೇಕು.

ಅರ್ಹ ಅಭ್ಯರ್ಥಿಗಳ ಮೇರಿಟ್ ಪಟ್ಟಿಯನ್ನು ಜೂನ್ 26 ರಂದು ಸಂಸ್ಥೆಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗುತ್ತದೆ. ಸೀಟು ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳು ಮೂಲ ದಾಖಲೆಗಗಳು ಮತ್ತು ನಿಗದಿತ ಶುಲ್ಕದೊಂದಿಗೆ ಜೂನ್ 28ರೊಳಗೆ ಪ್ರವೇಶ ಪಡೆದುಕೊಳ್ಳಬೇಕು.

ಸೀಟುಗಳು ಭರ್ತಿಯಾಗದೇ ಉಳಿಕೆಯಾದಲ್ಲಿ ಪ್ರಾಂಶುಪಾರ ಹಂತದಲ್ಲಿಯೇ ಅಂತಹ ಸೀಟುಗಳನ್ನು ಆಫ್ಲೈನ್ ಮೂಲಕ ಜೂನ್ 26 ರಿಂದ ಜುಲೈ 4 ರೊಳಗೆ ಹಂಚಿಕೆ ಮಾಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಪ್ರಿನ್ಸಿಪಾಲರ ದೂ.ಸಂ: 9448995682 ಹಾಗೂ ಕಚೇರಿ ದೂ.ಸಂ: 08382-226343 ಅಥವಾ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧೀಕೃತ ವೆಬ್ಸೈಟ್ dtetech.karnataka.gov.in/kartechnical or dtek.karnataka.gov.in ನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share: