ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ತಿಹಾರ್ ಜೈಲಿನಿಂದ ಹೊರಬಂದ ಕೇಜ್ರಿವಾಲ್ ಸರ್ವಾಧಿಕಾರದಿಂದ ದೇಶವನ್ನು ರಕ್ಷಿಸಬೇಕಿದೆ: ದಿಲ್ಲಿ ಸಿಎಂ

ತಿಹಾರ್ ಜೈಲಿನಿಂದ ಹೊರಬಂದ ಕೇಜ್ರಿವಾಲ್ ಸರ್ವಾಧಿಕಾರದಿಂದ ದೇಶವನ್ನು ರಕ್ಷಿಸಬೇಕಿದೆ: ದಿಲ್ಲಿ ಸಿಎಂ

Sat, 11 May 2024 15:10:28  Office Staff   Vb

ಹೊಸದಿಲ್ಲಿ: ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದ ಬಳಿಕ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರವಾಲ್ ಅವರು ಶುಕ್ರವಾರ ತಿಹಾರ್ ಜೈಲಿನಿಂದ ಹೊರ ಬಂದಿದ್ದಾರೆ.

ಸುಮಾರು 50 ದಿನಗಳ ನ್ಯಾಯಾಂಗ ಬಂಧನದ ಬಳಿಕ ಕೇಜ್ರವಾಲ್ ಅವರು ಇಂದು ಜೈಲಿನಿಂದ ಹೊರಬಂದರು.

ತಿಹಾ‌ರ್ ಜೈಲಿನಿಂದ ಬಿಡುಗಡೆಯಾದ ಬಳಿಕ ಪಕ್ಷದ ಕಾರ್ಯಕರ್ತರು ಹಾಗೂ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಕೇಜಿವಾಲ್, ನಾನು ನಿಮ್ಮೆಲ್ಲರಿಗೂ ಕೃತಜ್ಞತೆ ಸಲ್ಲಿಸಲು ಬಯಸುತ್ತೇನೆ. ನೀವು ನನ್ನನ್ನು ಆಶೀರ್ವದಿಸಿದಿರಿ. ನಾನು ಸುಪ್ರೀಂ ಕೋರ್ಟ್‌ ನ್ಯಾಯಾಧೀಶರಿಗೆ ಕೂಡ ಕೃತಜ್ಞತೆ ಸಲ್ಲಿಸಲು ಬಯಸುತ್ತೇನೆ. ಯಾಕೆಂದರೆ, ಅವರಿಂದಾಗಿ ನಾನು ನಿಮ್ಮ ಮುಂದಿದ್ದೇನೆ. ನಾವು ಸರ್ವಾಧಿಕಾರದಿಂದ ದೇಶವನ್ನು ರಕ್ಷಿಸಬೇಕಿದೆ ಎಂದಿದ್ದಾರೆ.

'ನಾವು ನಾಳೆ ಪೂರ್ವಾಹ್ನ 11 ಗಂಟೆಗೆ ಕನೌಟ್ ಪ್ಲೇಸ್‌ನಲ್ಲಿರುವ ಹನುಮಾನ್ ದೇವಾಲಯಕ್ಕೆ ಹೋಗಲಿದ್ದೇವೆ. ನಂತರ ಮಧ್ಯಾಹ್ನ 1 ಗಂಟೆಗೆ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಲಿದ್ದೇವೆ' ಎಂದು ಅವರು ಹೇಳಿದ್ದಾರೆ. ಕೇಜ್ರವಾಲ್ ಅವರು ತನ್ನ ಬೆಂಗಾವಲು ವಾಹನ ದೊಂದಿಗೆ ತಿಹಾರ್ ಜೈಲಿನಿಂದ ತನ್ನ ನಿವಾಸಕ್ಕೆ ತೆರಳಿದ ಸಂದರ್ಭ ಪತ್ನಿ ಸುನೀತಾ ಕೇಜ್ರವಾಲ್, ಪುತ್ರಿ ಹರ್ಷಿತಾ ಹಾಗೂ ಆಮ್ ಆದ್ಮ ಪಕ್ಷದ ರಾಜ್ಯ ಸಭಾ ಸದಸ್ಯ ಸಂದೀಪ್ ಪಾಠಕ್ ಜೊತೆಗಿದ್ದರು.


Share: