ಕಾರವಾರ : ಉತ್ತರಕನ್ನಡ ಜಿಲ್ಲೆಯಲ್ಲಿ ಮಳೆ ಜಾಸ್ತಿಯಾಗಿದ್ದರಿಂದ ಮುನ್ನೆಚ್ಚರಿಕೆಯಾಗಿ ಭಟ್ಕಳ, ಕುಮಟಾ ಮತ್ತು ಹೊನ್ನಾವರ ತಾಲ್ಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ಶುಕ್ರವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಅವರು ರಜೆ ಘೋಷಿಸಿ ಆದೇಶಿಸಿದ್ದು ಜುಲೈ 9ರವರೆಗೆ ಮಳೆ ಮುಂದುವರಿಯುವ ಬಗ್ಗೆ ಹವಾಮಾನ ಇಲಾಖೆ ತಿಳಿಸಿದ್ದರಿಂದ ಜನತೆ ಎಚ್ಚರದಿಂದಿರುವಂತೆ ತಿಳಿಸಿದ್ದಾರೆ.