ಬೆಂಗಳೂರು, ಮಾ. 14 : ಬಿಬಿಎಂಪಿ ಚುನಾವಣೆಗೆ ಉದ್ದೇಶ ಪೂರ್ವಕವಾಗಿಯೇ ನಾಯಕರು ಟಿಕೆಟ್ ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿ ಆಕ್ರೋಶಗೊಂಡ ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಮುಖಂಡರು ಸಭೆ ನಡೆಯುತ್ತಿದ್ದ ಖಾಸಗಿ ರೆಸಾರ್ಟ್‌ನ ಗೇಟ್, ಕಿಟಕಿಯ ಗಾಜುಗಳನ್ನು ಪುಡಿಗೈದ ಘಟನೆ ರವಿವಾರ ನಡೆದಿದೆ.
ನಗರದ ಬನ್ನೇರುಘಟ್ಟ ರಸ್ತೆಯಲ್ಲಿ ಖಾಸಗಿ ರೆಸಾರ್ಟ್‌ನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ದಾಳಿ ನಡೆಸಿದ್ದು, ಇದರಿಂದಾಗಿ ರೆಸಾರ್ಟ್ ಸುತ್ತಮುತ್ತಲ ಪ್ರದೇಶದಲ್ಲಿ ಕೆಲ ಕಾಲ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ಸ್ಥಳಕ್ಕೆ ಧಾವಿಸಿದ ಪೊಲೀಸರು ಆಕ್ರೋಶಗೊಂಡಿದ್ದ ಕಾರ್ಯಕರ್ತರನ್ನು ಸಮಾದಾನಪಡಿಸಿದರು. ಮುನ್ನಚ್ಚರಿಕೆಯಾಗಿ ಬಿಗಿ ಪೊಲೀಸರು ಭದ್ರತೆ ಕೈಗೊಂಡಿದ್ದರು.
ರವಿವಾರ ನಗರದ ಹೊರ ವಲಯದ ವಿಶಾಲ್ ರೆಸಾರ್ಟ್‌ನ ಒಳಗೆ ಕೆಪಿಸಿಸಿ ಅಧ್ಯಕ್ಷ ಆರ್.ವಿ.ದೇಶಪಾಂಡೆ, ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್, ರಾಜ್ಯಸಭಾ ಉಪ ಸಭಾಪತಿ ರೆಹಮಾನ್‌ಖಾನ್, ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್, ವಿಧಾನಸಭೆ ವಿರೋಧ ಪಕ್ಷದ ಮುಖಂಡ ಸಿದ್ಧರಾಮಯ್ಯ, ಮೋಟಮ್ಮ ಸೇರಿದಂತೆ ಪಕ್ಷದ ಮುಖಂಡರು ಬಿಬಿಎಂಪಿ ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ನಡೆಸಿದ್ದರು.
ಪಕ್ಷದ ನಿಷ್ಠಾವಂತರಿಗೆ ಟಿಕೆಟ್ ನೀಡದೆ ಹಣವಂತರಿಗೆ ಮತ್ತು ಹೊರಗಿನಿಂದ ಬಂದವರಿಗೆ ಟಿಕೆಟ್ ನೀಡಲು ಪಕ್ಷದ ಮುಖಂಡರು ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿ ಪಕ್ಷದ ನೂರಾರು ಕಾರ್ಯಕರ್ತರು ರೆಸಾರ್ಟ್‌ನ ಹೊರಗೆ ದಾಂಧಲೆ ಆರಂಭಿಸಿದರು.
ಕಾರ್ಯಕರ್ತರನ್ನು ಸಮಾದಾನಪಡಿಸಿಲು ಧಾವಿಸಿದ ಕಾಂಗ್ರೆಸ್ ಮುಖಂಡರ ಮೇಲೆಯೂ ಹರಿಹಾಯ್ದರು. ಸಭೆ ಆಗಮಿಸಿದ ಸಿದ್ಧರಾಮಯ್ಯನವರಿಗೂ ಕಾರ್ಯಕರ್ತರು ಘೇರಾವ್ ಹಾಕಿದ ಘಟನೆಯೂ ನಡೆಯಿತು.
ಯುವಕರಿಗೆ ಆಧ್ಯತೆ ನೀಡಬೇಕು ಎಂದು ಆಗ್ರಹಿಸಿ ಯುವ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿದರು. ಬಂಡಾಯ ಬಿಸಿಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿಲ್ಲ ಎಂದು ಹೇಳಲಾಗುತ್ತಿದೆ. ಕಳೆದ ಎರಡು ದಿನಗಳಿಂದಲೂ ಬಿಬಿಎಂಪಿ ಚುನಾವಣಾ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಅಂತಿಮ ಗೊಳಿಸಲು ಇನ್ನಿಲ್ಲದ ಕಸರತ್ತು ನಡೆಸಿದರೂ ಪಟ್ಟಿ ಸಿದ್ಧವಾಗಿಲ್ಲ.
ನಗರದ ಒಟ್ಟು ೧೯೮ ವಾರ್ಡ್‌ಗಳಿಗೆ ಸುಮಾರು ೧೨೦೦ಕ್ಕೂ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಆಯ್ಕೆ ದುಸ್ತರವಾಗಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ಮುಖಂಡರುಗಳು ಅಭ್ಯರ್ಥಿಗಳ ಆಯ್ಕೆಗೆ ತಲೆಕೆಡಿಸಿಕೊಂಡಿದ್ದಾರೆ. ಶೀಘ್ರದಲ್ಲೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಗೊಳಿಸಲಾಗುವುದು. ಗೆಲ್ಲುವ ಅಭ್ಯರ್ಥಿಗಳನ್ನು ಪಕ್ಷ ಕಣಕ್ಕಿಳಿಸಲಿದೆ. ಪಾಲಿಕೆಯಲ್ಲಿ ಕಾಂಗ್ರೆಸ್ ಬಾವುಟ ಹಾರಲಿದೆ ಎಂದು ಮುಖಂಡರು ಇದೇ ಸಂದರ್ಭದಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.