ಗ್ರಾಮ ಪಂಚಾಯತಿ ಚುನಾವಣೆ - ಮತದಾನ ದಿನದಂದು ರಜೆ ಘೋಷಣೆ
ಬೆಂಗಳೂರು, ಏಪ್ರಿಲ್ ೩೦ : (ಕರ್ನಾಟಕ ವಾರ್ತೆ) - ರಾಜ್ಯದ ಜಿಲ್ಲೆಗಳಲ್ಲಿರುವ ೫೪೭೬ ಗ್ರಾಮ ಪಂಚಾಯತ್‌ಗಳಿಗೆ ಏಪ್ರಿಲ್ ೮ ಮತ್ತು ೧೨ ರಂದು ನಡೆಯಲಿರುವ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಬಿ.ಬಿ.ಎಂ.ಪಿ, ಸಿ.ಎಂ.ಸಿ, ಹೊರತುಪಡಿಸಿ ಕೇವಲ ಗ್ರಾಮ ಪಂಚಾಯತ್‌ಗಳು/ಕ್ಷೇತ್ರದ ವ್ಯಾಪ್ತಿಯಲ್ಲಿರುವ ಬರುವ ರಾಜ್ಯ ಸರ್ಕಾರಿ ಕಚೇರಿಗಳಿಗೆ, ಕೇಂದ್ರ ಸರ್ಕಾರದ ಕಚೇರಿಗಳೀಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಕಾರ್ಖಾನೆ, ಕೈಗಾರಿಕಾ ಸಂಸ್ಥೆಗಳಿಗೆ, ಶಿಕ್ಷಣ ಸಂಸ್ಥೆಗಳಿಗೆ, ಶಾಲಾ - ಕಾಲೇಜುಗಳಿಗೆ (ಅನುದಾನಿತ ಶಿಕ್ಷಣ ಸಂಸ್ಥೆಗಳು ಸೇರಿದಂತೆ), ರಾಷ್ಟ್ರೀಕೃತ ಬ್ಯಾಂಕ್‌ಗಳು, ಇತರ ಬ್ಯಾಂಕ್, ಜೀವವಿಮಾ ನಿಗಮ, ಮುಂತಾದ ಕಚೇರಿಗಳಿಗೆ ಸರ್ಕಾರವು ಆಯಾ ಚುನಾವಣಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಯುವ ದಿನಾಂಕಗಳಂದು ಸಾರ್ವತ್ರಿಕ ರಜೆಯನ್ನು ಘೋಷಿಸಿದೆ.
ಯಾವುದೇ ವಾಣಿಜ್ಯ ಸಂಸ್ಥೆ, ಕೈಗಾರಿಕಾ ಸಂಸ್ಥೆ ಅಥವಾ ಇನ್ನಿತರ ಉದ್ಯಮ, ಸಂಸ್ಥೆಗಳಲ್ಲಿ ದಿನಗೂಲಿ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರು ಸಹ ಮತದಾನ ದಿನಾಂಕದಂದು ವೇತನ ಸಹಿತ ರಜೆಗೆ ಅರ್ಹರಾಗಿರುತ್ತಾರೆ. ಈ ರಜೆಯು ತುರ್ತು ಸೇವೆಗಳಿಗೆ ಅನ್ವಯಿಸುವುದಿಲ್ಲ.
ಚುನಾವಣಾ ಕಾರ್ಯಕ್ಕೆ ನಿಯೋಜಿಸಲ್ಪಟ್ಟ ಎಲ್ಲಾ ಸರ್ಕಾರಿ ನೌಕರರು ಸದರಿ ದಿನಾಂಕದಂದು ಚುನಾವಣಾ ಕಾರ್ಯದಲ್ಲಿ ಹಾಜರಾಗಬೇಕೆಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧಿಸೂಚನೆ ತಿಳಿಸಿದೆ.
ಮೇ ೮ ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತ್ರ, ರಾಮನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ, ಶಿವಮೊಗ್ಗ, ತುಮಕೂರು, ಬೀದರ್, ಬಳ್ಳಾರಿ, ಗುಲ್ಬರ್ಗಾ, ಯಾದಗಿರಿ, ರಆಯಚೂರು, ಕೊಪ್ಪಳ ಹಾಗೂ ಉಡುಒಇ ಜಿಲ್ಲೆಯ ಉಡುಪಿ ಮತ್ತು ಕಾರ್ಕಳ ತಾಲ್ಲೂಕುಗಳಲ್ಲಿ ನಡೆಯಲಿದೆ.
ಮೇ ೧೨ ರಂದು ಮೈಸೂರು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೊಡಗು, ಮಂಡ್ಯ, ಚಾಮರಾಜನಗರ, ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕು, ಬೆಳಗಾವಿ, ಬಿಜಾಪುರ, ಹಾವೇರಿ, ಬಾಗಲಕೋಟೆ, ಉತ್ತರ ಕನ್ನಡ, ಧಾರವಾಡ ಹಾಗೂ ಗದಗ ಜಿಲ್ಲೆಗಳಲ್ಲಿ ಮತದಾನ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.