ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಪ್ರಭಾಕರ್ ಭಟ್ ಸಾರ್ವಜನಿಕ ಭಾಷಣಕ್ಕೆ ನಿರ್ಬಂಧ ಆಗ್ರಹಿಸಿ ಜಮಾಅತೆ ಇಸ್ಲಾಮೀ ಹಿಂದ್ ಮಹಿಳಾ ಘಟಕದಿಂದ ಮನವಿ

ಪ್ರಭಾಕರ್ ಭಟ್ ಸಾರ್ವಜನಿಕ ಭಾಷಣಕ್ಕೆ ನಿರ್ಬಂಧ ಆಗ್ರಹಿಸಿ ಜಮಾಅತೆ ಇಸ್ಲಾಮೀ ಹಿಂದ್ ಮಹಿಳಾ ಘಟಕದಿಂದ ಮನವಿ

Sun, 31 Dec 2023 05:54:33  Office Staff   SO News

ಮಂಗಳೂರು : ಮುಸ್ಲಿಂ ಮಹಿಳೆಯರ ಬಗ್ಗೆ ಕೀಳಾಗಿ ಮಾತನಾಡಿದ ಕಲ್ಲಡ್ಕ ಪ್ರಭಾಕರ್ ಭಟ್ಟರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಜಮಾಅತೆ ಇಸ್ಲಾಮಿ ಹಿಂದ್ ಮಹಿಳಾ ವಿಭಾಗದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಮಾನ್ಯ ಪೊಲೀಸ್ ಕಮಿಷನರ್ ಅವರಿಗೆ ಮನವಿ ಸಲ್ಲಿಸಲಾಯಿತು.

ಅವರ ಸಾರ್ವಜನಿಕ ಭಾಷಣಕ್ಕೆ ನಿರ್ಬಂಧ ಹೇರಬೇಕು ಹಾಗೂ ಅವರ ವಿರುದ್ಧ ಕಾನೂನು ರೀತ್ಯಾ ಕ್ರಮವನ್ನು ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಯಿತು.

ನಿಯೋಗದಲ್ಲಿ ಜಮಾಅತೆ ಇಸ್ಲಾಮಿ ಹಿಂದ್ ಮಂಗಳೂರು ನಗರ ಸಂಚಾಲಕಿ ಸುಮಯ್ಯ ಹಮೀದುಲ್ಲಾಹ್, ಉಪ ಸಂಚಾಲಕಿ ಶಹೀದ ಉಮರ್ ಹಾಗೂ ಅನುಪಮಾ ಮಹಿಳಾ ಮಾಸಿಕದ ಸಂಪಾದಕಿ ಶಹನಾಝ್. ಎಂ. ಉಪಸ್ಥಿತರಿದ್ದರು


Share: