ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಫೆಂಗಲ್ ಪ್ರಭಾವ: ರಾಜ್ಯದ ವಿವಿಧೆಡೆ ವ್ಯಾಪಕ ಮಳೆ; ಇನ್ನೆರಡು ದಿನ ಮಳೆ ಮುಂದುವರಿಯುವ ಸಾಧ್ಯತೆ

ಫೆಂಗಲ್ ಪ್ರಭಾವ: ರಾಜ್ಯದ ವಿವಿಧೆಡೆ ವ್ಯಾಪಕ ಮಳೆ; ಇನ್ನೆರಡು ದಿನ ಮಳೆ ಮುಂದುವರಿಯುವ ಸಾಧ್ಯತೆ

Tue, 03 Dec 2024 15:07:17  Office Staff   Vb

ಬೆಂಗಳೂರು: 'ಫೆಂಗಲ್' ಚಂಡಮಾರುತದ ಪ್ರಭಾವದಿಂದಾಗಿ ಬೆಂಗಳೂರು ಹಾಗೂ ರಾಜ್ಯದ ಹಲವೆಡೆ ಭಾರೀ ಮಳೆಯಾಗಿದೆ. ಮುಂದಿನ ಎರಡು ದಿನ ಕಾಲ ನಿರಂತರ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.

ಚಂಡಮಾರುತದ ಪ್ರಭಾವದಿಂದ ರವಿವಾರ ಸಂಜೆಯಿಂದ ನಿರಂತರ ಮಳೆಯಾಗುತ್ತಿದೆ. ಚಂಡಮಾರುತದ ತೀವ್ರತೆ ಬುಧವಾರದಿ೦ದ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಭಾರತದ ಹವಾಮಾನ ಇಲಾಖೆ ತಿಳಿಸಿದೆ.

ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಹಾಗೂ ಹಾಸನ, ಮಂಡ್ಯ, ರಾಮನಗರದಂತಹ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಡುಪಿ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಐಎಂಡಿ ಬೆಂಗಳೂರಿನ ನಿರ್ದೇಶಕ ಸಿ.ಎಸ್. ಪಾಟೀಲ್ ಹೇಳಿದ್ದಾರೆ.

ಮೈಸೂರು, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಕೋಲಾರ, ಚಿಕ್ಕಮಗಳೂರು ಈ ಜಿಲ್ಲೆಗಳಲ್ಲಿ ಮಂಗಳವಾರ ಶಾಲಾ, ಕಾ ಲೇಜುಗಳಿಗೆ ಅಲ್ಲಿನ ಜಿಲ್ಲಾಡಳಿತಗಳು ರಜೆ ಘೋಷಿಸಿವೆ.

ಡಿಸೆಂಬರ್ 3ರಂದು ದಕ್ಷಿಣ ಕರ್ನಾಟಕದ ಕರಾವಳಿಯಲ್ಲಿ 35 ರಿಂದ 55 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆ ಇದೆ. ಈ ಅವಧಿಯಲ್ಲಿ ಈ ಪ್ರದೇಶಗಳಲ್ಲಿ ಮೀನುಗಾರಿಕೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಐಎಂಡಿ ಮುನ್ನೆಚ್ಚರಿಕೆ ನೀಡಿದೆ.

ಡಿಸೆಂಬರ್ 3ರಂದು ಉಡುಪಿ, ದಕ್ಷಿಣ ಕನ್ನಡ, ಮೈಸೂರು, ಕೊಡಗು, ರಾಮನಗರ ಹಾಗೂ ಚಾಮರಾಜನಗರದ ಅಲ್ಲಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ನಿರೀಕ್ಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮೀಣ, ತುಮಕೂರು ಹಾಗೂ ಇತರ ಜಿಲ್ಲೆಗಳು ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಸಾಧಾರಣ ಮಳೆ ಸುರಿಯುವ ನಿರೀಕ್ಷೆ ಇದೆ ಎಂದು ಐಎಂಡಿ ತಿಳಿಸಿದೆ.

ಆರೆಂಜ್ ಅಲರ್ಟ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಲಾದ ಪ್ರದೇಶಗಳಲ್ಲಿ ವಾಸಿಸುವ ಜನರು ಎಚ್ಚರಿಕೆ ವಹಿಸುವಂತೆ ಐಎಂಡಿ ಮುನ್ನೆಚ್ಚರಿಕೆ ನೀಡಿದೆ.


Share: