ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಬೆಂಗಳೂರಿಗೆ ಆಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಆತ್ಮೀಯ ಸ್ವಾಗತ

ಬೆಂಗಳೂರಿಗೆ ಆಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಆತ್ಮೀಯ ಸ್ವಾಗತ

Sat, 20 Jan 2024 14:37:23  Office Staff   S O News

ಬೆಂಗಳೂರು: ಬೆಂಗಳೂರಿನ ಬಿ.ಮಾರೇನಹಳ್ಳಿಯಲ್ಲಿರುವ ಬೋಯಿಂಗ್ ಇಂಡಿಯಾ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ಸೆಂಟರ್‍ನ ಉದ್ಘಾಟನೆ ಹಾಗೂ ಬೋಯಿಂಗ್ ಸುಕನ್ಯಾ ಲೋಕಾರ್ಪಣೆ ಮಾಡಿ ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸುವ ಸಲುವಾಗಿ ಇಂದು ಗೌರವಾನ್ವಿತ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರು ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಗೌರವಾನ್ವಿತ ಪ್ರಧಾನ ಮಂತ್ರಿಯವರನ್ನು ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಆತ್ಮೀಯವಾಗಿ ಸ್ವಾಗತಿಸಿದರು.

ಈ ಸಮಯದಲ್ಲಿ ಸಚಿವರಾದ ಕೆ.ಜೆ. ಜಾರ್ಜ್, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ರಜನೀಶ್ ಗೋಯಲ್, ಕರ್ನಾಟಕ ರಾಜ್ಯ ಪೆÇಲೀಸ್ ಮಹಾನಿರ್ದೇಶಕರಾದ ಅಲೋಕ್ ಮೋಹನ್, ಬೆಂಗಳೂರು ಪೆÇಲೀಸ್ ಆಯುಕ್ತರಾದ ಬಿ. ದಯಾನಂದ ಸೇರಿದಂತೆ ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ.ಸದಾನಂದ ಗೌಡ, ಲೋಕಸಭಾ ಸದಸ್ಯರಾದ ಪಿ.ಸಿ. ಮೋಹನ್, ಭಾರತೀಯ ಜನತಾ ಪಾರ್ಟಿ ರಾಜ್ಯಧ್ಯಕ್ಷರಾದ ಬಿ. ವೈ. ವಿಜಯೇಂದ್ರ ಹಾಗೂ ಶಾಸಕರು, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


Share: