ಬೆಂಗಳೂರು: ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಾರವಾರ ಶಾಸಕ ಸತೀಶ್ ಸೈಲ್ ಸೇರಿದಂತೆ ಈ ಪ್ರಕರಣದ ಪ್ರಮುಖ ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿದೆ.
11,312 ಮೆಟ್ರಿಕ್ ಟನ್ ನಷ್ಟು ಸೀಝ್ ಮಾಡಲಾದ ಅದಿರನ್ನು ಅನುಮತಿ ಇಲ್ಲದೇ ಸಾಗಾಟ ಮಾಡಲಾಗಿತ್ತು. ನ್ಯಾಯಾಲಯವು ಈ ಪ್ರಕರಣದ ಪ್ರಮುಖ ಆರೋಪಿಗಳಾದ ಮಹೇಶ್ ಬಿಳಿಯೆ, ಮಲ್ಲಿಕಾರ್ಜುನ ಶಿಪ್ಪಿಂಗ್ ಹಾಗೂ ಶಾಸಕ ಸತೀಶ್ ಸೈಲ್ ಅವರನ್ನು ದೋಷಿಗಳೆಂದು ಘೋಷಿಸಿದೆ.
ಜನಪ್ರತಿನಿಧಿಗಳ ನ್ಯಾಯಾಧೀಶರು, ಎಲ್ಲಾ ಅಪರಾಧಿಗಳನ್ನು ಕೂಡಲೇ ವಶಕ್ಕೆ ಪಡೆಯುವಂತೆ ಆದೇಶ ನೀಡಿದ್ದು, ಶಿಕ್ಷೆಯ ಪ್ರಮಾಣವನ್ನು ನಾಳೆ (ಅ.25) ಪ್ರಕಟಿಸಲಾಗುವುದು.