ಕಾರವಾರ : ಮೇ 18ರಿಂದ 22 ರ ವರೆಗೆ ಬಂಗಾಲ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ
ಕರ್ನಾಟಕ ಕರಾವಳಿ ಪ್ರದೇಶಾದ್ಯಂತ 40 ಕಿಮೀ ನಿಂದ 55 ಕಿಮೀ ವೇಗದಲ್ಲಿ ಗಾಳಿ ಬೀಸಲಿದ್ದು ಸಮುದ್ರ ಪ್ರಕ್ಷುಬ್ದಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ ಎಂದು ತಿಳಿಸಿದೆ.
ಮುಂಜಾಗ್ರತ ಕ್ರಮವಾಗಿ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರಿಕೆ ದೋಣಿಗಳು( ಬೋಟ್ ಗಳು) ಕೂಡಲೇ ದಡ ಸೇರುವಂತೆ ಉತ್ತರಕನ್ನಡ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.