ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ರಸ್ತೆ ಅಪಘಾತ; ದೇವಸ್ಥಾನಕ್ಕೆ ಹೊರಟಿದ್ದ ಒಂದೇ ಕುಟುಂಬದ ನಾಲ್ವರ ಸಾವು

ರಸ್ತೆ ಅಪಘಾತ; ದೇವಸ್ಥಾನಕ್ಕೆ ಹೊರಟಿದ್ದ ಒಂದೇ ಕುಟುಂಬದ ನಾಲ್ವರ ಸಾವು

Sun, 18 Aug 2024 21:29:17  Office Staff   SOnews


ಗದಗ: ಕೆಎಸ್ಸಾರ್ಟಿಸಿ ಬಸ್ ಮತ್ತು ಕಾರೊಂದರ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ಹೊರವಲಯದಲ್ಲಿ ಇಂದು ಮುಂಜಾನೆ 6:30ರ ಸುಮಾರಿಗೆ ಸಂಭವಿಸಿದೆ.  

ಮೃತರನ್ನು ಹಾವೇರಿ ಮೂಲದ ರುದ್ರಪ್ಪ ಅಂಗಡಿ(55), ಪತ್ನಿ ರಾಜೇಶ್ವರಿ(45), ಮಗಳು ಐಶ್ವರ್ಯ (16) ಮತ್ತು ಮಗ ವಿಜಯ(12) ಎಂದು ಗುರುತಿಸಲಾಗಿದೆ.  

ಶ್ರಾವಣ ಮಾಸದ ನಿಮಿತ್ತ ರುದ್ರಪ್ಪ ಕುಟುಂಬ ಸಮೇತ ಕಲ್ಲಾಪೂರ ಬಸವೇಶ್ವರ ದೇವಸ್ಥಾನಕ್ಕೆ ಹೊರಟ್ಟಿದ್ದರು. ಇವರಿದ್ದ ಕಾರು ಕೊಣ್ಣೂರ ಗ್ರಾಮದ ಹೊರವಲಯ ತಲುಪಿದಾಗ ಇಳಕಲ್ ನಿಂದ ಹುಬ್ಬಳ್ಳಿಗೆ ಹೊರಟಿದ್ದ ಕೆಎಸ್ಸಾರ್ಟಿಸಿ ಬಸ್ ಮಧ್ಯೆ ಮುಖಾಮುಖಿ ಸಂಭವಿಸಿದೆ ಎಂದು ತಿಳಿದುಬಂದಿದೆ.

ಅಪಘಾತದ ರಭಸಕ್ಕೆ ನಾಲ್ವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.  ಈ ಬಗ್ಗೆ ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

a2.jpg


Share: