ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ರಾಷ್ಟ್ರೀಯ ಸುದ್ದಿ / ಹಾಸನ:ಆಂಜನೇಯಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನ

ಹಾಸನ:ಆಂಜನೇಯಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನ

Mon, 30 Nov 2009 02:24:00  Office Staff   S.O. News Service
ಹಾಸನ, ನ.೨೯- ಚನ್ನರಾಯಪಟ್ಟಣದ ಹಳೇ ಬಸ್ ನಿಲ್ದಾಣದ ಬಳಿ ಇರುವ ೪೦ ಅಡಿ ಎತ್ತರದ ಆಂಜನೇಯಸ್ವಾಮಿ ದೇವಾಲಯದಲ್ಲಿ ಹನುಮ ಜಯಂತಿ ಅಂಗವಾಗಿ ಭಾನುವಾರ ವಿಶೇಷ ಪೂಜಾ ಕೈಂಕರ್ಯಗಳು ನಡೆದವು.

ಚನ್ನರಾಯಪಟ್ಟಣದ ವಿನಾಯಕ ಕಾರ್ ಚಾಲಕರ ಸಂಘದ ನೇತೃತ್ವದಲ್ಲಿ ನಡೆಯುತ್ತಿರುವ ಹನುಮ ಜಯಂತಿ ಕಾರ್ಯಕ್ರಮದಲ್ಲಿ ಭಾನುವಾರ ಹೋಮ-ಹವನ, ಮಹಾಮಂಗಳಾರತಿ, ಪೂರ್ಣಾವಧಿ ಕಾರ್ಯಗಳು ಜರುಗಿದವು.

ನಂತರ ಆಂಜನೇಯಸ್ವಾಮಿ ಮೂರ್ತಿಯನ್ನು ಉಯ್ಯಾಲೆಯಲ್ಲಿ ಪ್ರತಿಷ್ಟಾಪಿಸಿ ವಿಶೇಷ ಪೂಜಾ ಕಾರ್ಯಗಳನ್ನು ನೆರವೇರಿಸಲಾಯಿತು.

ದೇವಾಲಯಕ್ಕೆ ನೂರಾರು ಭಕ್ತರು ಭೇಟಿ ನೀಡಿ ಪೂಜೆ ಸಲ್ಲಿಸಿರು. ವಿಶೇಷ ಎಂಬಂತೆ ಹೆದ್ದಾರಿಯಲ್ಲಿ ತೆರಳುತ್ತಿದ್ದ ವಿದೇಶಿ ಪ್ರವಾಸಿಗರು ಕೂಡ ಪೂಜಾ ಕಾರ್ಯಗಳಲ್ಲಿ ಪಾಲ್ಗೊಂಡು ಹನುಮನ ಕೃಪೆಗೆ ಪಾತ್ರರಾದರು.

ಪ್ರತಿ ವರ್ಷ ವಿಶೇಷವಾಗಿ ಹನುಮ ಜಯಂತಿ ಆಚರಿಸುತ್ತಿದ್ದು, ೧೧ ವರ್ಷದ ಉತ್ಸವವನ್ನು ನಿಷ್ಟೆ ಮತ್ತು ಅದ್ಧೂರಿಯಿಂದ ನಡೆಸಲು ಉದ್ದೇಶಿಸಲಾಗಿದೆ  ಎಂದು ವಿನಾಯಕ ಕಾರ್ ಚಾಲಕರ ಸಂಘದ ಗೌರವಾಧ್ಯಕ್ಷ ಕೃಷ್ಣ ಹೇಳಿದರು.


Share: