ಕಾರವಾರ: ರಾಜ್ಯದ ಗೌರವಾನ್ವಿತ ಮುಖ್ಯಮಂತ್ರಿ ಸಿದ್ಧರಾಮಯ್ಯರನ್ನು ನಿಂದನಾತ್ಮಕವಾಗಿ ಅವಾಚ್ಯ, ಅಪಮಾನಕರ ಮತ್ತು ಏಕವಚನದಿಂದ ಮಾತನಾಡಿರುವ ಪ್ರಕರಣ ಈಗ ಉ.ಕ ಲೋಕಸಭಾ ಕ್ಷೇತ್ರದ ಹಾಲಿ ಸಂಸದರಿಗೆ ಕಂಟಕಪ್ರಾಯವಾಗಿ ಪರಣಮಿಸಿದ್ದು ಮುಂಡಗೋಡ ಠಾಣೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿರುವ ಬಗ್ಗೆ ವರದಿಯಾಗಿದೆ.
ಮುಂಡಗೋಡದ ಪಾಳಾದಲ್ಲಿ ಶುಕ್ರವಾರ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ್ದ ಅನಂತಕುಮಾರ ಹೆಗಡೆ, ಸಿದ್ದರಾಮಯ್ಯ ಅವರನ್ನು ʼಸಿದ್ರಾಮುಲ್ಲಾ ಖಾನ್ʼ ಎಂದು ನಿಂದಿಸಿದ್ದರು. ಅಲ್ಲದೆ ದಿಲ್ಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಖಾಲಿಸ್ತಾನಿಗಳು ಎಂದು ಟೀಕಿಸಿದ್ದರು. ಧಾರ್ಮಿಕ, ಸಾಮಾಜಿಕವಾಗಿ ಅಪಮಾನಕರ ರೀತಿಯಲ್ಲಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಸಂಸದರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್ ಮಾಹಿತಿ ನೀಡಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಟಿಕೇಟು ಪಡೆಯಲು ಇಲ್ಲದ ಕಸರತ್ತು ನಡೆಸಿರುವ ಹೆಗಡೆ, ಮುಸ್ಲಿಮ್ ವಿರೋಧಿ ಹೇಳಿಕೆಗಳನ್ನು ನೀಡುವಲ್ಲಿ ನಿಸ್ಸೀಮರಾಗಿದ್ದಾರೆ ಎನ್ನುವುದು ಇಲ್ಲಿ ಗಮನಾರ್ಹ