ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಸಚಿವ ವೈದ್ಯರ ಗೃಹ ಕಚೇರಿಯಲ್ಲಿ ಜನತಾ ದರ್ಶನ; ಕ್ಷೇತ್ರದ ಅಭಿವೃದ್ಧಿಯ ವಿಷಯದಲ್ಲಿ ರಾಜಿಯಿಲ್ಲ ಎಂದ ಸಚಿವ

ಸಚಿವ ವೈದ್ಯರ ಗೃಹ ಕಚೇರಿಯಲ್ಲಿ ಜನತಾ ದರ್ಶನ; ಕ್ಷೇತ್ರದ ಅಭಿವೃದ್ಧಿಯ ವಿಷಯದಲ್ಲಿ ರಾಜಿಯಿಲ್ಲ ಎಂದ ಸಚಿವ

Mon, 01 Jul 2024 02:35:15  Office Staff   SOnews

 

ಭಟ್ಕಳ: ಜನರ ಸಮಸ್ಯೆಗಳಿಗೆ ಸ್ಪಂಧಿಸುವ ನಿಟ್ಟಿನಲ್ಲಿ ಉತ್ತರಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ಮುರುಢೇಶ್ವರದ ತಮ್ಮ ಸ್ವಗೃಹದಲ್ಲಿ ಭಾನುವಾರ ಜನತಾ ದರ್ಶನ ನಡೆಸುವುದರ ಮೂಲಕ ಜನರ ಸಮಸ್ಯೆಗಳನ್ನು ಆಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ನನ್ನನ್ನು ಮಂತ್ರಿಯನ್ನಾಗಿ ಮಾಡಿದ ಜನರ ಋಣ ತೀರಿಸುವುದು ನನ್ನ ಕರ್ತವ್ಯ. ಕ್ಷೇತ್ರದ ಅಭಿವೃದ್ಧಿಗಾಗಿ ನಾನು ಪ್ರಥಮ ಆಧ್ಯತೆ ನೀಡುತ್ತೇನೆ, ಜನಸಾಮಾನ್ಯರ ಕಷ್ಟಗಳನ್ನು ಪರಿಹರಿಸುವ ಕೆಲಸ ಮಾಡುತ್ತೇನೆ ಎಂದರು.

ಜನ ಸಾಮಾನ್ಯರ ಕುಂದುಕೊರತೆಯನ್ನು ನೀಗಿಸುವ ಉದ್ದೇಶದೊಂದಿಗೆ ಭಟ್ಕಳದ ಶಾಸಕರ ಕಚೇರಿ ಹಾಗೂ ತಮ್ಮ ಸ್ವಗೃಹದಲ್ಲಿ ಜನತಾ ದರ್ಶನ ನಡೆಸುತ್ತ ಬಂದಿದ್ದು ನೂರಾರು ಮಂದಿ ತಮ್ಮ ಸಮಸ್ಯೆಗಳೊಂದಿಗೆ ಬಂದು ಪರಿಹಾರ ಪಡೆದುಕೊಳ್ಳುತ್ತಿದ್ದಾರೆ.


Share: