ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಸಮಾಜ ಸೇವಕಿ ಸುಧಾ ಮೂರ್ತಿ ರಾಜ್ಯಸಭೆಗೆ ನಾಮನಿರ್ದೇಶನ; ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ

ಸಮಾಜ ಸೇವಕಿ ಸುಧಾ ಮೂರ್ತಿ ರಾಜ್ಯಸಭೆಗೆ ನಾಮನಿರ್ದೇಶನ; ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ

Fri, 08 Mar 2024 22:22:17  Office Staff   SOnews

ಹೊಸದಿಲ್ಲಿ: ಖ್ಯಾತ ಲೇಖಕಿ ಮತ್ತು ಸಮಾಜ ಸೇವಕಿ ಸುಧಾ ಮೂರ್ತಿ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದಾರೆ.  

ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸುಧಾಮೂರ್ತಿ ಅವರನ್ನು ಅಭಿನಂದಿಸಿದ್ದಾರೆ. ರಾಜ್ಯಸಭೆಯಲ್ಲಿ ಸುಧಾಮೂರ್ತಿ ಅವರ ಉಪಸ್ಥಿತಿ ದೇಶದ ನಾರಿ ಶಕ್ತಿಯ ಪ್ರಬಲ ದ್ಯೋತಕವಾಗಲಿದೆ ಎಂದು ಪ್ರಧಾನಿ ಹೇಳಿದ್ದಾರೆ.   ಅಂತರ್ ರಾಷ್ಟ್ರೀಯ ಮಹಿಳಾ ದಿನದಂದು ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದು ವಿಶೇಷವಾಗಿದೆ.  “ಭಾರತದ ರಾಷ್ಟ್ರಪತಿಗಳು ಶ್ರೀಮತಿ ಸುಧಾ ಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದು ಖುಷಿ ನೀಡಿದೆ. ಸಮಾಜ ಸೇವೆ, ದಾನ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ಅವರ ಸೇವೆ ಅಪಾರ ಮತ್ತು ಸ್ಫೂರ್ತಿದಾಯಕ” ಎಂದು ಪ್ರಧಾನಿ ಪೋಸ್ಟ್‌ ಮಾಡಿದ್ದಾರೆ. ದೇಶದ ಭವಿಷ್ಯವನ್ನು ರೂಪಿಸುವಲ್ಲಿ ಮಹಿಳೆಯರ ಶಕ್ತಿ ಮತ್ತು ಸಾಮರ್ಥ್ಯವನ್ನೂ ಅವರು ಉಲ್ಲೇಖಿಸಿದ್ದಾರೆ.


Share: