ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ರಾಜ್ಯಸಭಾ ಸಂಸದ ಸೀತಾರಾಂ ಯೆಚೂರಿ ನಿಧನ

ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ರಾಜ್ಯಸಭಾ ಸಂಸದ ಸೀತಾರಾಂ ಯೆಚೂರಿ ನಿಧನ

Thu, 12 Sep 2024 22:21:22  Office Staff   SOnews

ಹೊಸದಿಲ್ಲಿ: ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ರಾಜ್ಯಸಭಾ ಸಂಸದ ಸೀತಾರಾಂ ಯೆಚೂರಿ ಅವರು ನಿಧನರಾಗಿದ್ದಾರೆ.  

72 ವರ್ಷದ ಸೀತರಾಂ ಯೆಚೂರಿ ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.   ತೀವ್ರ ಉಸಿರಾಟದ ಸೋಂಕಿನಿಂದ ಬಳಲುತ್ತಿದ್ದ ಅವರನ್ನು ಇತ್ತೀಚೆಗೆ ದೆಹಲಿಯ ಏಮ್ಸ್ ನ ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿತ್ತು. ಕಳೆದ ಕೆಲವು ದಿನಗಳಿಂದ ಅವರು ವೆಂಟಿಲೇಟರ್ ಸಹಾಯದಿಂದಿದ್ದರು.

ನುರಿತ ವೈದ್ಯರ ತಂಡವು ಅವರ ಆರೋಗ್ಯದ ಮೇಲೆ ನಿಗಾ ವಹಿಸಿತ್ತು. ಆದರೆ ಇಂದು ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ.


Share: