ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಗೆ ವಿಶೇಷ ತಂಡ ರಚನೆ

ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಗೆ ವಿಶೇಷ ತಂಡ ರಚನೆ

Wed, 11 Sep 2024 06:21:00  Office Staff   S O News

ಬೆಂಗಳೂರು: ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ಲೈಂಗಿಕ ಹಿಂಸೆಯನ್ನು ಅಳವಡಿಸಿ, ಖಾಸಗಿ ವೀಡಿಯೋಗಳನ್ನು ಚಿತ್ರೀಕರಿಸಿ ಮಾಧ್ಯಮಗಳಲ್ಲಿ ಪ್ರಸಾರ ಮಾಡಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ, ಪ್ರಭಾವಿ ರಾಜಕಾರಣಿಗಳು ಅನೇಕ ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆಯ ಮನವಿಗೆ ತಕ್ಕಂತೆ, ಈ ಘಟನೆಗೆ ಸಂಬಂಧಿಸಿದವರು ಮತ್ತು ಚಿತ್ರೀಕರಣ ಮಾಡಿದ ವ್ಯಕ್ತಿಗಳನ್ನು ಶೀಘ್ರವಾಗಿ ಪತ್ತೆಹಚ್ಚಿ, ಕಠಿಣ ಕಾನೂನು ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಆದೇಶಿಸಿದೆ.

ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಸಿಐಡಿಯಲ್ಲಿ ಮೊಕದ್ದಮೆ ದಾಖಲಾಗಿದ್ದು (ಪ್ರಕರಣ ಸಂಖ್ಯೆ: 02/2024), ಈ ಪ್ರಕರಣದ ಸಮಗ್ರ ತನಿಖೆಗಾಗಿ ರಾಜ್ಯ ಸರ್ಕಾರದ ಆದೇಶದಂತೆ ಎಸ್‍ಐಟಿಯು (ವಿಶೇಷ ತನಿಖಾ ತಂಡ) ರಚಿಸಲಾಗಿದೆ. ಈ ವಿಶೇಷ ತಂಡವು ಸೈಬರ್ ಕ್ರೈಂ ಪೆÇಲೀಸ್ ಇಲಾಖೆಯಿಂದ ವರದಿಯಾದ ಪ್ರಕರಣವನ್ನು ವಹಿಸಿಕೊಂಡು, 113 ಸಾಕ್ಷಿದಾರರನ್ನು ವಿಚಾರಣೆಗೊಳಪಡಿಸಿದ್ದು, ಜೈವಿಕ, ಭೌತಿಕ ಮತ್ತು ಡಿಜಿಟಲ್ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದೆ.

ಎಸ್‍ಐಟಿಯು ಪ್ರಜ್ವಲ್ ರೇವಣ್ಣ ಅವರ ವಿರುದ್ಧ 1652 ಪುಟಗಳ ದೋಷಾರೋಪಣ ಪಟ್ಟಿಯನ್ನು ಸಿದ್ಧಪಡಿಸಿ, ಬೆಂಗಳೂರಿನ ಸಿಸಿಹೆಚ್-42 ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದೆ.
 


Share: